ರಾಜ್ಯದಲ್ಲಿ ತೃತೀಯ ಲಿಂಗಿಗಳ ಶ್ರೇಯೋಭಿವೃದ್ಧಿಗಾಗಿ ಪ್ರತ್ಯೇಕ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಸಚಿವ ಹಾಲಪ್ಪ ಅಚಾರ್ ಹೇಳಿದ್ದಾರೆ. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯೆ ಭಾರತಿ ಶೆಟ್ಟಿ ವಿಷಯ ಪ್ರಸ್ತಾಪಿಸಿ, ರಾಜ್ಯದಲ್ಲಿ 2011ರ ಜನಗಣತಿ ಪ್ರಕಾರ 20,266 ಲಿಂಗ ಅಲ್ಪಸಂಖ್ಯಾತರು ಇದ್ದಾರೆ ಎಂಬ ಮಾಹಿತಿ ಇದೆ. ಆದರೆ ಇವರ ಸಂಖ್ಯೆ2.5 ಲಕ್ಷಕ್ಕೂ ಹೆಚ್ಚಿದೆ. ಅವರ ಬಗ್ಗೆ ಪ್ರತ್ಯೇಕ ಸಮೀಕ್ಷೆ ಆಗಿಲ್ಲ. ಅವರ ಶ್ರೇಯೋಭಿವೃದ್ದಿಗಾಗಿ ಕಾಳಜಿ ಇರುವ ಅಧಿಕಾರಿಗಳನ್ನು ಒಳಗೊಂಡ ನಿಗಮ ರಚಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು, ಲಿಂಗತ್ವ ಅಲ್ಪ ಸಂಖ್ಯಾತರ ಪ್ರತ್ಯೇಕ ಸಮಿಕ್ಷೆಗೆ ನಿರ್ಧರಿಸಲಾಗಿದೆ. ಸಮೀಕ್ಷೆಗಾಗಿ ಅವರನ್ನೇ ಬಳಸಿಕೊಳ್ಳಲಾಗುತ್ತದೆ. ಸರಕಾರದ ಎಲ್ಲ ಇಲಾಖೆಗಳ ನೇಮಕಾತಿಯಲ್ಲೂ ಶೇ.1 ಮೀಸಲಾತಿ ನೀಡಬೇಕೇಂಬ ನಿಯಮವಿದೆ.ಆದರೆ ಸರಿಯಾಗಿ ಜಾರಿಯಾಗುತ್ತಿಲ್ಲ ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ :
https://play.google.com/store/apps/details?id=com.nationaltv.kannada