ಪುನೀತ್ ರಾಜಕುಮಾರ್ ನೇತ್ರದಾನದಿಂದ ಪ್ರೇರಣೆ ಪಡೆದ ಅವರ ಸಾವಿರಾರು ಅಭಿಮಾನಿಗಳು ಒಂದು ಹೆಜ್ಜೆ ಮುಂದೆ ಹೋಗಿ ಅಂಗಾಂಗ ದಾನದ ಪ್ರತಿಜ್ಞೆ ಪಡೆದಿದ್ದಾರೆ. ಇನ್ನೊಂದೆಡೆ ನಾರಾಯಣ ನೇತ್ರಾಲಯದಲ್ಲಿ ಮೂರು ದಶಕಗಳ ನೋಂದಣಿಯ ದಾಖಲೆಯನ್ನು ಮುರಿದು ಕೇವಲ ನಾಲ್ಕು ತಿಂಗಳಲ್ಲಿ ಬರೋಬ್ಬರಿ 70 ಸಾವಿರ ಮಂದಿ ನೇತ್ರದಾನಕ್ಕೆ ನೋಂದಣಿಯಾಗಿದ್ದಾರೆ. ಒಂದು ಸಾವಿರಕ್ಕೂ ಅಧಿಕ ಕಣ್ಣುಗಳು ಸಂಗ್ರಹವಾಗಿವೆ. ಅಪ್ಪು ಮಾದರಿಯಲ್ಲಿ ದೇಹದಾನ ಮಾಡಲು ಯುವಕರು ಮುಂದಾಗಿ, ಮರಣ ನಂತರವೂ ತಮ್ಮ ದೇಹದ ಅಂಗಾಂಗಳನ್ನು ದಾನ ಮಾಡಬೇಕು ಎಂದು ಅಪೂರ್ವ ಸ್ನೇಹ ಬಳಗದ ಅಧ್ಯಕ್ಷ ಅಪೂರ್ವ ಸುರೇಶ್ ಹೇಳಿದ್ದಾರೆ. ಅಪೂರ್ವ ಸ್ನೇಹ ಬಳಗದ ವತಿಯಿಂದ ಡಾ.ಪುನೀತ್ ರಾಜ್ ಕುಮಾರ್ ರವರ ಜನ್ಮದಿನಾಚರಣೆ ಅಂಗವಾಗಿ ಕುವೆಂಪುನಗರದಲ್ಲಿರುವ ಮೈತ್ರಿ ಟ್ರಸ್ಟ್ ನ ವಿಶೇಷ ಮಕ್ಕಳಿಗೆ ಚಾಮುಂಡಿಪುರಂನಲ್ಲಿರುವ ಅಪೂರ್ವ ಹೋಟೆಲ್ ನಲ್ಲಿ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಿ ಮಾತನಾಡಿದ ಅವರು, ನಟ ಪುನೀತ್ ರಾಜ್ಕುಮಾರ್ ತಮ್ಮ ಸಾಮಾಜಿಕ ಕಾರ್ಯಗಳ ಮೂಲಕ ಎಲ್ಲರಿಗೂ ಮಾದರಿಯಾಗಿದ್ದಾರೆ.
ಅವರ ನಿಧನದ ನಂತರ ಅವರು ಮಾಡುತ್ತಿದ್ದ ಸಾಮಾಜಿಕ ಕಾರ್ಯಗಳು ತಿಳಿದು ಬಂದಿವೆ. ಅನಾಥಶ್ರಮ, ಸಾವಿರಾರು ಮಕ್ಕಳಿಗೆ ವಿದ್ಯಾಭ್ಯಾಸ ಸೇರಿದಂತೆ ವಿವಿಧ ಸಾಮಾಜಿಕ ಕಾರ್ಯ ಮಾಡುತ್ತಿದ್ದರು. ಅಂಥವರನ್ನು ಕಳೆದುಕೊಂಡಿದ್ದು, ರಾಜ್ಯಕ್ಕೆ ತುಂಬಾ ನಷ್ಟವಾಗಿದೆ. ಅಪ್ಪು ಸಣ್ಣ ವಯಸ್ಸಿನಲ್ಲಿಯೇ ಮಹತ್ಕಾರ್ಯಗಳನ್ನು ಮಾಡಿದ್ದಾರೆ. ಇವರ ಸೇವೆ ಎಲ್ಲರಿಗೂ ಮಾದರಿಯಾಗಿದೆ ಎಂದರು.ಮೈತ್ರಿ ಟ್ರಸ್ಟ್ ನ ಮುಖ್ಯಸ್ಥರಾದ ವೆಂಕೋಬ್ ರಾವ್, ಬಸವರಾಜ್ ಬಸಪ್ಪ, ಜಯರಾಮ ಪೂಜಾರಿ, ಪುರುಷೋತ್ತಮ್, ಸುಚೇಂದ್ರ ಹಾಗೂ ಶಿಕ್ಷಕರು ಹಾಜರಿದ್ದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada