ಸದಾಶಿವ ನಗರದಲ್ಲಿರುವ ಅಪ್ಪು ಮನೆಗೆ ಟಾಲಿವುಡ್ ಕಾಮಿಡಿ ಸ್ಟಾರ್ ಬ್ರಹ್ಮಾನಂದಂ ಹಾಗೂ ಅಲಿ ಭೇಟಿ ನೀಡಿ ರಾಜ್ ಕುಟುಂಬಕ್ಕೆ ಸಾಂತ್ವನ ಹೇಳಿದ್ದಾರೆ. ಅಪ್ಪು ಭಾವಚಿತ್ರಕ್ಕೆ ನಮನ ಸಲ್ಲಿಸಿದ ಅವರು, ಈ ವೇಳೆ ಅಪ್ಪು ಜೊತೆಗೆ ಕಳೆದ ದಿನಗಳನ್ನು ಬ್ರಹ್ಮಾನಂದಂ ಅಪ್ಪು ಕುಟುಂಬದೊಂದಿಗೆ ಸ್ಮರಿಸಿಕೊಂಡಿದ್ದಾರೆ.
ಬಳಿಕ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿ ಅವರಿಗೆ ಬ್ರಹ್ಮಾನಂದಂ ಹಾಗೂ ಅಲಿ ಸಾಂತ್ವಾನದ ಮಾತುಗಳನ್ನ ಹೇಳಿದ್ದಾರೆ. ಈ ಸಂದರ್ಭದಲ್ಲಿ ರಾಘವೇಂದ್ರ ರಾಜ್ಕುಮಾರ್, ರಾಮ್ ಕುಮಾರ್ ಪುತ್ರ ಧೀರೇನ್ ರಾಮ್ ಕುಮಾರ್, ಯುವ ರಾಜ್ಕುಮಾರ್ ಸಹ ಇದ್ದರು. ಅವರೊಂದಿಗೂ ಹಲವು ಹೊತ್ತು ಮಾತುಕತೆ ನಡೆಸಿದ್ದಾರೆ.