ಪಡಗಾನೂರ ಗ್ರಾಮದಲ್ಲಿನ ರಸ್ತೆಗಳು ತೀವ್ರ ಹದಗೆಟ್ಟಿದ್ದು, ಬಿಜಾಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ವ್ಯಾಪ್ತಿಯಲ್ಲಿ ಬರುವ ಪಡಗಾನೂರ ಗ್ರಾಮ ಅಭಿವೃದ್ಧಿ ಕಾಣದಾಗಿದೆ. ಈ ಗ್ರಾಮದ ಅಭಿವೃದ್ಧಿ ಕೆಲಸಗಳನ್ನು ನೋಡಿದರೆ ಗ್ರಾಮ ಪಂಚಾಯತಿಯ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ಕಾಣುತ್ತಿದೆ.
ರಸ್ತೆಗಳು ಸಂಪೂರ್ಣ ಹಾಳಾಗಿದ್ದು, ಚರಂಡಿ ಹುಂಡಿಗಳಾಗಿವೆ, ಕುಡಿಯುವ ನೀರಿನ ಸಮಸ್ಯೆ, ವಿದ್ಯುತ್ ಸಮಸ್ಯೆ ತಾಂಡವವಾಡುತ್ತಿದೆ. ಈ ಬಗ್ಗೆ ಸಾರ್ವಜನಿಕರ ಧ್ವನಿಗೆ ಹೋರಾಟಗಳಿಗೆ ಗ್ರಾಮ ಪಂಚಾಯತಿ ಅಧಿಕಾರಿಗಳು ಕ್ಯಾರೆ ಎನ್ನುತ್ತಿಲ್ಲ. ಈ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕರು ಹೆಸರಿಗೆ ಮಾತ್ರ ಅಭಿವೃದ್ಧಿ ಹರಿಕಾರರು ತನ್ನದೇ ಕ್ಷೇತ್ರದಲ್ಲಿ ಬರುವ ಪಡಗಾನೂರ ಗ್ರಾಮದಲ್ಲಿ ಈ ರೀತಿ ಸಮಸ್ಯೆಗಳು ಇದ್ದರೂ ಕೂಡ ಸ್ವಲ್ಪನು ಗಮನಹರಿಸಿಲ್ಲ. ಗ್ರಾಮದ ಹಿರಿಯರು, ಯುವಕರು, ಮಹಿಳೆಯರು, ಮತ್ತು ಗ್ರಾಮದ ನಿವಾಸಿಗಳು ಎಲ್ಲರೂ ಒಗ್ಗಟ್ಟಾಗಿ ಹಲವಾರು ಬಾರಿ ಪ್ರತಿಭಟನೆ ಮಾಡಿ ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಮಾಡಿದರೂ ಕೂಡ ಅಧಿಕಾರಿಗಳು ಗಮನಹರಿಸುತ್ತಿಲ್ಲ. ಇದೇ ಮುಂದುವರೆದರೆ ಮತ್ತೆ ಗ್ರಾಮದ ನಿವಾಸಿಗಳು ಬೀದಿಗಳಿದು ತಮ್ಮ ಹಕ್ಕಿಗಾಗಿ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡುತ್ತೇವೆ. ಶಾಸಕರು ಏನು ಮಾಡುತ್ತಿದ್ದೀರಾ ಸಂಬಂಧಪಟ್ಟ ಅಧಿಕಾರಿಗಳು ಏನು ಮಾಡುತ್ತಿದ್ದೀರಾ. ಈ ಗ್ರಾಮದ ಪುಟ್ಟ ಮಕ್ಕಳು ಗೋಳು ನಿಮಗೆ ಕಣ್ಣಿಗೆ ಕಾಣುತ್ತಿಲ್ಲವೇ. ಅಥವಾ ಕಣ್ಣೀರು ಕುರುಡು ರಾಗಿ ಕೊಡುತ್ತಿದ್ದೀರಾ? ಎಂದು ಸಾರ್ವಜನಿಕರು ತಮ್ಮ ಆಕ್ರೋಶ ಹೊರ ಹಾಕಿದ್ದಾರೆ. ಈ ಸಂದರ್ಭದಲ್ಲಿ ಗ್ರಾಮದ ಹಿರಿಯರು ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು..