ಭಾರತವನ್ನು ನೋಡಿ ಸ್ವಾಭಿಮಾನ ಕಲಿಯಬೇಕು: ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೇಳಿಕೆ

ಪಾಕಿಸ್ತಾನದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಷ್ಟ್ರವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಭಾರತವನ್ನು ಹಾಡಿ ಹೊಗಳಿದ್ದಾರೆ.

ಇಸ್ಲಾಮಾಬಾದ್(ಪಾಕಿಸ್ತಾನ): ಯಾವುದೇ ಸೂಪರ್​ ಪವರ್ ರಾಷ್ಟ್ರ ಭಾರತದ ವಿರುದ್ಧ ಮಾತನಾಡುವುದಿಲ್ಲ.

ಭಾರತದ ವಿದೇಶಾಂಗ ನೀತಿಗಳು ಅಷ್ಟೊಂದು ಬಲಿಷ್ಟವಾಗಿವೆ ಎಂದು ಇಮ್ರಾನ್ ಖಾನ್ ಭಾರತವನ್ನು ಹಾಡಿ ಹೊಗಳಿದ್ದಾರೆ. ಕೆಲವು ವಾರಗಳಿಂದ ಪಾಕಿಸ್ತಾನದಲ್ಲಿ ರಾಜಕೀಯ ಅನಿಶ್ಚಿತತೆ ಕಾಡುತ್ತಿದ್ದು, ಈ ಹಿನ್ನೆಲೆಯಲ್ಲಿ ಇಮ್ರಾನ್ ಕುರ್ಚಿಗೆ ಕಂಟಕ ಎದುರಾಗಿದೆ. ಈ ಬೆನ್ನಲ್ಲೇ ಅವಿಶ್ವಾಸ ನಿರ್ಣಯ ಮಂಡಿಸಲೇಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿದ ಹಿನ್ನೆಲೆಯಲ್ಲಿ ದೇಶವನ್ನು ಉದ್ದೇಶಿಸಿ ಮಾತನಾಡಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಈ ರೀತಿಯಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ರಷ್ಯಾ-ಉಕ್ರೇನ್ ಯುದ್ಧದಲ್ಲಿ ಯಾವುದೇ ದೇಶದ ಪರ ನಿರ್ಣಯ ತೆಗೆದುಕೊಳ್ಳಲು ಭಾರತ ನಿರಾಕರಿಸಿದ್ದು, ಈ ವೇಳೆ ಯಾವ ದೇಶವೂ ಭಾರತದ ವಿರುದ್ಧ ನಿಲ್ಲಲು ಸಾಧ್ಯವಾಗಲಿಲ್ಲ. ಆದರೆ ಯೂರೋಪಿಯನ್ ಯೂನಿಯನ್​ನ ರಾಜತಾಂತ್ರಿಕ ಅಧಿಕಾರಿಗಳು ಪಾಕಿಸ್ತಾನವನ್ನು ರಷ್ಯಾದ ವಿರುದ್ಧ ಮಾತನಾಡಬೇಕು ಎಂದು ಒತ್ತಡ ಹೇರುತ್ತಲೇ ಇದ್ದರು. ಆದರೆ ಭಾರತವನ್ನು ಒತ್ತಾಯಿಸುವ ಧೈರ್ಯ ಆ ಅಧಿಕಾರಿಗಳಿಗೆ ಇರಲಿಲ್ಲ ಎಂದು ನಮ್ಮ ವಿದೇಶಾಂಗ ನೀತಿಯೂ ಭಾರತೀಯ ವಿದೇಶಾಂಗ ನೀತಿಯಂತೆ ಸಾರ್ವಭೌಮವಾಗಿರಬೇಕು, ಭಾರತವನ್ನು ನೋಡಿ ಪಾಕಿಸ್ತಾನ ಸ್ವಾಭಿಮಾನವನ್ನು ಕಲಿಯಬೇಕು ಎಂದು ಇಮ್ರಾನ್ ಹೇಳಿದ್ದಾರೆ.

ಭಾರತೀಯರನ್ನು ‘ಖುದ್ದರ್ ಕ್ವಾಮ್’ ಎಂದು ಇಮ್ರಾನ್ ಖಾನ್ ಬಣ್ಣಿಸಿದ್ದಾರೆ. ಖುದ್ದರ್ ಕ್ವಾಮ್ ಎಂದರೆ ‘ಬಹಳ ಸ್ವಾಭಿಮಾನಿಗಳು’ ಎಂಬ ಅರ್ಥವಿದ್ದು, ಯಾವುದೇ ಸೂಪರ್​ಪವರ್ ಭಾರತಕ್ಕೆ ಷರತ್ತುಗಳನ್ನು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೇಳಿಕೊಂಡಿದ್ದಾರೆ. ಇದರ ಜೊತೆಗೆ ಸುಪ್ರೀಂ ಕೋರ್ಟ್ ಅವಿಶ್ವಾಸ ನಿರ್ಣಯವನ್ನು ಮಂಡಿಸಬೇಕೆಂದು ತೀರ್ಪು ನೀಡಿದ್ದು, ಆ ತೀರ್ಪಿನಿಂದ ನಾನು ನಿರಾಸೆಗೊಂಡಿದ್ದೇನೆ ಎಂದು ಇಮ್ರಾನ್ ಖಾನ್ ಹೇಳಿದ್ದಾರೆ.

ಇಂದು ಅವಿಶ್ವಾಸ ನಿರ್ಣಯದ ಮತದಾನ: ನ್ಯಾಷನಲ್ ಅಸೆಂಬ್ಲಿಯಲ್ಲಿ ಇಮ್ರಾನ್ ವಿರುದ್ಧದ ಅವಿಶ್ವಾಸ ನಿರ್ಣಯವನ್ನು ಡೆಪ್ಯುಟಿ ಸ್ಪೀಕರ್ ಖಾಸಿಂ ಸೂರಿ ತಿರಸ್ಕರಿಸಿದ್ದರು. ಈ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸುಪ್ರೀಂಕೋರ್ಟ್​ಗೆ ಮೊರೆಹೋಗಿದ್ದು, ಇಂದು ಬೆಳಗ್ಗೆ 10:30ರ ನಂತರ ಅವಿಶ್ವಾಸ ನಿರ್ಣಯದ ಮತದಾನ ನಡೆಸಬೇಕೆಂದು ಸುಪ್ರೀಂಕೋರ್ಟ್ ತೀರ್ಪು ನೀಡಿತ್ತು. ಇದರ ಜೊತೆಗೆ ರಾಷ್ಟ್ರೀಯ ಅಸೆಂಬ್ಲಿ ಅಧಿವೇಶನವನ್ನು ಮತ ಚಲಾವಣೆ ಮುಗಿಯುವವರೆಗೆ ಮುಂದೂಡಬಾರದೆಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಇಂದು ಅವಿಶ್ವಾಸ ನಿರ್ಣಯದ ಮತದಾನವನ್ನು ಇಮ್ರಾನ್ ಖಾನ್ ಎದುರಿಸಲಿದ್ದು, ಪಾಕ್ ರಾಜಕೀಯದಲ್ಲಿ ಕುತೂಹಲ ಹೆಚ್ಚಾಗಿದೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

 

Leave a Reply

Your email address will not be published. Required fields are marked *

Next Post

ಪಡಿತರ ಚೀಟಿದಾರರಿಗೆ ಕೇಂದ್ರದಿಂದ ಸಿಹಿ ಸುದ್ದಿ

Sat Apr 9 , 2022
ಪಡಿತರ ವ್ಯವಸ್ಥೆಯ ಮೂಲಕ ಸಾರವರ್ಧಿತ ಅಕ್ಕಿ ವಿತರಿಸಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮೂರು ಹಂತದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತದೆ. ಕೇಂದ್ರ ಮಾಹಿತಿ, ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಡಿತರ ವ್ಯವಸ್ಥೆ ಮೂಲಕ ಸಾರವರ್ಧಿತ ಅಕ್ಕಿ ವಿತರಿಸಲಾಗುವುದು. ಮೊದಲ ಹಂತದಲ್ಲಿ ಪ್ರಧಾನಮಂತ್ರಿ ಪೋಷಣ ಯೋಜನೆ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿತರಿಸಲಾಗುವುದು ಎಂದರು. ಎರಡನೇ ಹಂತದಲ್ಲಿ ಅಭಿವೃದ್ಧಿ ಕುಂಠಿತವಾಗಿರುವ ಜಿಲ್ಲೆಗಳಲ್ಲಿ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: