ರಾಜಧಾನಿ ಬೆಂಗಳೂರಿನಲ್ಲಿ ರೋಡ್ ರಾಬರ್ಸ್ ಹಾವಳಿ ಹೆಚ್ಚಾಗಿದೆ. ಒಬ್ಬಂಟಿಯಾಗಿ ಬೈಕ್ಗಳಲ್ಲಿ ಮಧ್ಯರಾತ್ರಿ ಓಡಾಡುವರು ಎಚ್ಚರ ವಹಿಸಬೇಕಾಗಿದೆ. ಬೈಕ್ ಅಡ್ಡಗಟ್ಟಿ ಮಾರಕಾಸ್ತ್ರಗಳಿಂದ ಬೆದರಿಸಿ ರಾಬರಿ ಮಾಡುವವರು ಹೆಚ್ಚಿದ್ದಾರೆ. ಮಾರ್ಚ್ 25ನೇ ತಾರೀಖು ಮುಂಜಾನೆ 3 ಗಂಟೆ ಸಮಯದಲ್ಲಿ ನಡೆದಿರುವ ಇಂತಹದೇ ಘಟನೆ ಬೆಳಕಿಗೆ ಬಂದಿದೆ. ರಾಬರ್ಸ್ ಡೆಡ್ಲಿ ಅಟ್ಯಾಕ್ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಬೈಕ್ ಅಡ್ಡಗಟ್ಟಿದ ರಾಬರ್ಸ್ಗೆ ಪ್ರತಿರೋಧ ಮಾಡಿದ ಯುವಕನಿಗೆ ಮನಬಂದಂತೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಲಾಗಿದೆ. ದಮ್ಮಯ್ಯ ಅಂತ ಬೇಡಿಕೊಂಡು ಓಡಿದ್ರೂ ಅಟ್ಟಾಡಿಸಿಕೊಂಡು ಹಲ್ಲೆ ನಡೆಸಲಾಗಿದೆ. ಮೊಬೈಲ್, ಹಣ ಕಿತ್ತುಕೊಂಡು ಹಲ್ಲೆ ಮಾಡಿ ಗ್ಯಾಂಗ್ ಎಸ್ಕೇಪ್ ಆಗಿದೆ. ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.
Next Post
ಚಂದ್ರಮೌಳೇಶ್ವರ ದೇವಸ್ಥಾನದಲ್ಲಿ ಶಿವಲಿಂಗವನ್ನು ಸ್ಪರ್ಶಿಸಿದ ಸೂರ್ಯ ರಶ್ಮಿ
Mon Apr 4 , 2022
ಹುಬ್ಬಳ್ಳಿ: ಹುಬ್ಬಳ್ಳಿಯ ಉಣಕಲ್ ನ ಚಂದ್ರಮೌಳೇಶ್ವರ ದೇವಸ್ಥಾನದಲ್ಲೂ ಯುಗಾದಿ ಸಂಭ್ರಮ ಕಳೆಗಟ್ಟಿದ್ದು, ಮುಂಜಾನೆಯ ಸೂರ್ಯ ರಶ್ಮಿ ಶಿವಲಿಂಗವನ್ನು ಸ್ಪರ್ಶಿಸುವ ಘಳಿಗೆಯನ್ನು ಭಕ್ತರು ಕಣ್ತುಂಬಿಕೊಂಡಿದ್ದಾರೆ. ಹೌದು ಹುಬ್ಬಳ್ಳಿ ಯಲ್ಲಿ ಶತಮಾನಗಳಷ್ಟು ಹಳೆಯದಾದ ಚಂದ್ರಮೌಳೇಶ್ವರನ ದರ್ಶನ ಪಡೆದರೆ ಇಷ್ಟಾರ್ಥಗಳು ಈಡೇರುತ್ತದೆ ಎಂಬ ನಂಬಿಕೆ ಇಲ್ಲಿನ ಜನರದ್ದಾಗಿದೆ. ಈ ಹಿನ್ನೆಲೆಯಲ್ಲಿ ಯುಗಾದಿ ದಿನದಂದು ದೇವಸ್ಥಾನಕ್ಕೆ ಭೇಟಿ ನೀಡಿ ಸೂರ್ಯ ರಶ್ಮಿ ಶಿವಲಿಂಗ ಸ್ಪರ್ಶಿಸುವುದರ ದರ್ಶನ ಪಡೆಯುತ್ತಾರೆ. ಇದು 12 ನೇ ಶತಮಾನದಲ್ಲಿ ಚಾಲುಕ್ಯರ ಕಾಲದಲ್ಲಿ […]

You May Like
-
10 months ago
ಡ್ರಗ್ಸ್ ಇನ್ ಬಿಗ್ ಬಾಸ್..
-
11 months ago
ಭಾರತದಲ್ಲಿ ಕೋವಿಡ್ ಪ್ರಕರಣಗಳು……
-
10 months ago
ಪೊಲೀಸರ ಜೊತೆ ಡಿಜಿ ಐಜಿಪಿ ಪ್ರವೀಣ್ ಸೂದ್ ಹೈವೋಲ್ಟೇಜ್ ಮೀಟಿಂಗ್