ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಉದ್ಯೋಗಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಿದ್ದು, 300 ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ, ಎಸ್ಎಸ್ಎಲ್ಸಿ ಪಾಸ್ ಆದವರು ಮಾರ್ಚ್ 30ರ ಒಳಗೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನ ವಾಗಿದೆ. ತಾಂತ್ರಿಕ ವೃತ್ತಿಗಳಲ್ಲಿ ಪೂರ್ಣಾವಧಿ ತರಬೇತಿಗೆ ಅರ್ಹ ಅಭ್ಯರ್ಥಿಗಳಿಂದ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಆನ್ಲೈನ್ ಅರ್ಜಿಯ ಪ್ರತಿಯೊಂದಿಗೆ ಇತ್ತೀಚಿನ 02 ಪಾಸ್ಪೋರ್ಟ್ ಅಳತೆಯ ಭಾವಚಿತ್ರ ಮತ್ತು ಸಂಬಂಧಪಟ್ಟ ಎಲ್ಲ ಮೂಲ ದಾಖಲಾತಿಗಳೊಂದಿಗೆ, ಮೂಲ ದಾಖಲೆಗಳ ಪರಿಶೀಲನೆ ಹಾಗೂ ಸಂದರ್ಶನಕ್ಕೆ ಹಾಜರಾಗಲು ಸೂಚಿಸಲಾಗಿದೆ. ಇನ್ನು ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪೈಕಿ, ನಿಗದಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ ಎಂದು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ.
Next Post
ಊಟ ಸೇವಿಸಿ 50ಕ್ಕೂ ಹೆಚ್ಚು ಮಂದಿಗೆ ವಾಂತಿ ಬೇಧಿ…!
Wed Mar 23 , 2022
ಊಟ ಸೇವಿಸಿದ್ದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಈ ಘಟನೆಯು ಬಾಗಲಕೋಟೆ ತಾಲೂಕಿನ ಡೋಮನಾಳ ಗ್ರಾಮದಲ್ಲಿ ಉರುಸ್ನಲ್ಲಿ ನಡೆದಿದೆ. 22 ಮಕ್ಕಳು ಸೇರಿದಂತೆ 26 ಜನರಿಗೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಊಟ ಸೇವಿಸಿದ್ದ ಇವರಿಗೆ ವಾಂತಿ–ಬೇಧಿ ಕಾಣಿಸಿಕೊಂಡಿದ್ದು,ಇವರೆಲ್ಲರನ್ನು ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

You May Like
-
11 months ago
ಉಡುಪಿಯಲ್ಲಿ ಸಿಲಿಂಡರ್ ಸ್ಫೋಟ!
-
11 months ago
ರಂಗಭೂಮಿ ಕಲಾವಿದೆ ಮೇಲೆ ಆಸಿಡ್ ದಾಳಿ……!