ಚಿರಂಜೀವಿ ಸೊಸೆ, ಬಿಗ್ ಬಾಸ್ ವಿನ್ನರ್ ಸೇರಿ 142 ಜನರ ಬಂಧನ.

ಪೊಲೀಸ್ಟಾಸ್ಕ್ ಫೋರ್ಸ್ ತಂಡವು ಭಾನುವಾರ ಮುಂಜಾನೆ ಬಂಜಾರಾ ಹಿಲ್ಸ್ ಪಂಚತಾರಾ ಹೋಟೆಲ್ ಪಬ್ನಲ್ಲಿ ರೇವ್ ಪಾರ್ಟಿಯ ಮೇಲೆ ದಾಳಿ ನಡೆಸಿದೆ. ದಾಳಿಯಲ್ಲಿ ವಿಐಪಿಗಳು, ನಟರು ಮತ್ತು ರಾಜಕಾರಣಿಗಳ ಮಕ್ಕಳು ಸೇರಿದಂತೆ ಸುಮಾರು 142 ಜನರನ್ನು ಕಸ್ಟಡಿಗೆ ತೆಗೆದುಕೊಂಡಿದ್ದಾರೆ.

ಕೊಕೇನ್ ನಂತಹ ನಿಷೇಧಿತ ಪದಾರ್ಥಗಳನ್ನು ದಾಳಿಯ ವೇಳೆ ಪತ್ತೆ ಮಾಡಲಾಗಿದೆ ಎಂದು ವರದಿಯಾಗಿದೆ.

ಬಂಧಿತರಲ್ಲಿ ನಟ ನಾಗಬಾಬು ಅವರ ಪುತ್ರಿ, ಮೆಗಾಸ್ಟಾರ್ ಚಿರಂಜೀವಿ ಅವರ ಸೊಸೆಯೂ ಆಗಿರುವ ನಿಹಾರಿಕಾ ಕೊನಿಡೇಲಾ ಕೂಡ ಸೇರಿದ್ದಾರೆ. ನಂತರ ನಾಗಬಾಬು ವಿಡಿಯೋ ಬಿಡುಗಡೆ ಮಾಡಿ ತಮ್ಮ ಮಗಳಿಗೆ ಡ್ರಗ್ಸ್ ಜೊತೆ ಯಾವುದೇ ಸಂಬಂಧವಿಲ್ಲ ಎಂದು ಹೇಳಿದ್ದಾರೆ.

ಬಂಧಿತವರಲ್ಲಿ ಗಾಯಕ ಮತ್ತು ಬಿಗ್ ಬಾಸ್ ತೆಲುಗು ರಿಯಾಲಿಟಿ ಶೋ ವಿಜೇತ ರಾಹುಲ್ ಸಿಪ್ಲಿಗುಂಜ್ ಕೂಡ ಸೇರಿದ್ದಾರೆ. ಫೆಬ್ರವರಿ 12 ರಂದು ಹೈದರಾಬಾದ್ ಪೊಲೀಸರು ಡ್ರಗ್ಸ್ ವಿರುದ್ಧ ಅಭಿಯಾನವನ್ನು ಪ್ರಾರಂಭಿಸಿದಾಗ ರಾಹುಲ್ ಥೀಮ್ ಹಾಡನ್ನು ಹಾಡಿದ್ದರು. ಆದರೆ ಅವರೇ ಈಗ ಡ್ರಗ್ಸ್ ಕೇಸ್ ನಲ್ಲಿ ಪೊಲೀಸರ ಅತಿಥಿಯಾಗಿದ್ದಾರೆ.

ಪಾರ್ಟಿಯಲ್ಲಿದ್ದ ಇತರರಲ್ಲಿ ಆಂಧ್ರಪ್ರದೇಶದ ಉನ್ನತ ಪೋಲೀಸರೊಬ್ಬರ ಮಗಳು ಮತ್ತು ರಾಜ್ಯದ ತೆಲುಗು ದೇಶಂ ಸಂಸದರ ಮಗ ಕೂಡ ಇದ್ದರು. “ತನ್ನ ಮಗ ಹುಟ್ಟುಹಬ್ಬದ ಪಾರ್ಟಿಗೆ ಹೋಗಿದ್ದಾನ, ಆದರೆ ಸುಳ್ಳು ಆರೋಪ ಮಾಡಲಾಗುತ್ತಿದೆ. ನಗರದ ಎಲ್ಲಾ ಪಬ್ಗಳನ್ನು ಮುಚ್ಚಬೇಕುಎಂದು ತೆಲಂಗಾಣದ ಕಾಂಗ್ರೆಸ್ ನಾಯಕ ಅಂಜನ್ ಕುಮಾರ್ ಯಾದವ್ ಹೇಳಿದ್ದಾರೆ.

ಬಂಜಾರಾ ಹಿಲ್ಸ್ನಲ್ಲಿರುವ ಸ್ಟೇಷನ್ ಹೌಸ್ ಆಫೀಸರ್ (ಎಸ್ಎಚ್) ಶಿವಚಂದ್ರ ಅವರನ್ನು ಕರ್ತವ್ಯ ನಿರ್ಲಕ್ಷ್ಯಕ್ಕಾಗಿ ಹೈದರಾಬಾದ್ ಪೊಲೀಸ್ ಕಮಿಷನರ್ ಸಿವಿ ಆನಂದ್ ಅಮಾನತುಗೊಳಿಸಿದ್ದಾರೆ. ಅವರ ಸ್ಥಾನಕ್ಕೆ ಕೆ ನಾಗೇಶ್ವರ ರಾವ್ ಅವರನ್ನು ಟಾಸ್ಕ್ ಫೋರ್ಸ್ ನಿಂದ ನೇಮಿಸಲಾಗಿದೆ.

 

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

"ಗಿರ್ಕಿ" ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದರ ಸೆಂಚುರಿ ಸ್ಟಾರ್..

Mon Apr 4 , 2022
  ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರದ ಮೋಷನ್ ಪೋಸ್ಟರನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದ್ದು, ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ. ಲವ್, ಥ್ರಿಲ್ಲರ್  ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: