ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೋ ಇಲ್ಲವೋ ಎಂಬುದನ್ನು ತೋರಿಸಲೇ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗದರಿಸಿದ್ದರಿಂದ ಕಾಂಗ್ರೆಸ್ ಸದಸ್ಯರು ತಡಬಡಾಯಿಸಿದ ಘಟನೆ ವಿಧಾನ ಪರಿಷತ್ ನಲ್ಲಿ ನಡೆಯಿತು.
ಪ್ರಶ್ನೋತ್ತರದ ಅವಧಿಯಲ್ಲಿ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಅವರು, ನಗರದ ಬೊಮ್ಮನಹಳ್ಳಿ ವಲಯದಲ್ಲಿ ಭೂ ಪರಿವರ್ತನೆಗೊಂಡ ಏಕ ನಿವೇಶನವನ್ನು ನಿಯಮಬಾಹಿರವಾಗಿ ಖಾತೆ ವಿಭಜನೆ ಮಾಡಿದ್ದಾರೆ ಎಂದು ಆರೋಪಿಸಿದ್ದಲ್ಲದೆ, ತಪಿಸ್ತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಂಡು ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೆ ಎಂದು ತೋರಿಸಿ ಎಂದು ಸವಾಲು ಹಾಕಿದರು.
ಇದರಿಂದ ಸಿಟ್ಟಾದ ಮುಖ್ಯಮಂತ್ರಿಯವರು, ಈ ರೀತಿಯೆಲ್ಲೇ ಮಾತನಾಡಬಾರದು, ರಾಜ್ಯದಲ್ಲಿ ಮುಖ್ಯಮಂತ್ರಿ ಇದ್ದಾರೋ ಇಲ್ಲವೋ ಎಂದು ಸೂಕ್ತ ಕ್ರಮಗಳ ಮೂಲಕ ತೋರಿಸಬೇಕಾ, ತೋರಿಸಲಾ ಎಂದು ಗಡಸು ಧ್ವನಿಯಲ್ಲಿ ಹೇಳಿದರು.ಮುಖ್ಯಮಂತ್ರಿಯವರ ಸಿಟ್ಟಿನಿಂದ ತಬ್ಬಿಬ್ಬಾದ ವೆಂಕಟೇಶ್ ಅವರು, ಬೇಡ ಸರ್, ಮಾಡಿ ಸರ್ ಎಂದು ತಡಬಡಾಯಿಸುತ್ತಾ ಕುಳಿತುಕೊಂಡರು.
ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಯವರು, ಖಾತೆ ವಿಭಜನೆಯಲ್ಲಿ ಅಧಿಕಾರಿಗಳು ತಪ್ಪು ಮಾಡಿದ್ದಾರೆ ಎಂದು ನಾನೇ ಉತ್ತರ ನೀಡಿದ್ದೇನೆ. ಬಿಬಿಎಂಪಿಯಲ್ಲಿ ಆಸ್ತಿ ವಿಭಜನೆಗೆ ಅವಕಾಶ ಇಲ್ಲ. ಅಧಿಕಾರಿಳು ಕಾನೂನು ಬಾಹಿತವಾಗಿ ಆಸ್ತಿ ವಿಭಜನೆ ಮಾಡಿದ್ದಾರೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಬಿಎಂಪಿಯ ಕಂದಾಯ ನಿರೀಕ್ಷಕ, ಉಪ ಆಯುಕ್ತ, ಜಂಟಿ ಆಯುಕ್ತರ ವಿರುದ್ಧ ಕ್ರಮಕ್ಕೆ ಸೂಚಿಸಲಾಗಿದೆ ಎಂದರು. ಬಿಬಿಎಂಪಿಗೆ ಹಿರಿಯ ಕೆಎಎಸ್ ಅಧಿಕಾರಿಗಳನ್ನು ಸೇವೆಗೆ ನಿಯೋಜಿಸಲು ನಿರ್ಧರಿಸಲಾಗಿದೆ ಎಂದು ಸ್ಪಷ್ಟ ಪಡಿಸಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada