ಇನ್ನು ಈಶ್ವರಪ್ಪ ರಾಜೀನಾಮೆ ಪಡೆಯುವ ವಿಚಾರಕ್ಕೆ ಸಂಬಂಧಪಟ್ಟಂತೆ ಮಾಧ್ಯಮಗಳು ಕೇಳಿದ ಪ್ರಶ್ಬೆಗೆ ಉತ್ತರಿಸಿದ ಸಿಎಂ, ಪ್ರಾಥಮಿಕ ತನಿಖೆ ಆಗುವವರೆಗೂ ಯಾವುದೇ ರೀತಿಯ ಕ್ರಮ ಇಲ್ಲಎಂದು ಹೇಳಿದ್ಧಾರೆ.
ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆಗೆ ಸಂಬಂಧಿಸಿದಂತೆ ಸಚಿವ ಈಶ್ವರಪ್ಪ ಬಂಧನಕ್ಕೆ ಕಾಂಗ್ರೆಸ್ ಹೋರಾಟದ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದು, ಕಾಂಗ್ರೆಸ್ ನವರ ಕಾಲದಲ್ಲಿ ಹಲವು ಕೊಲೆಗಳು ಆಗಿ, ಆ ಕೊಲೆ ಮಾಡಿದವರ ಕೇಸ್ ವಾಪಸ್ಸು ಪಡೆದು ಈಗ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ. ಇವತ್ತು ಕಾಂಗ್ರೆಸ್ ಅವರಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದಕ್ಕೆ ಅವರನ್ನು ಜನರು ತಿರಸ್ಕಾರ ಮಾಡಿದ್ದಾರೆ. ಅವರಿಗೆ ಯಾವುದೇ ನೈತಿಕತೆ ಇಲ್ಲ. ಅವ್ರು ಬರೀ ರಾಜಕೀಯ ಲಾಭಕ್ಕಾಗಿ ಇದನ್ನು ಮಾಡ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಕಿಡಿಕಾರಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada