ಆರ್ಸಿಬಿ ತನ್ನ ಟ್ವಿಟರ್ ಖಾತೆಯಲ್ಲಿ ವಿರಾಟ್ ಕೊಹ್ಲಿ ತಂಡ ಸೇರಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ‘ಕಿಂಗ್ ಕೊಹ್ಲಿಯ ಆಗಮನವಾಗಿದೆ. ಇದುವೇ ಈಗ ದೊಡ್ಡ ಸುದ್ದಿ’ ಎಂದು ಆರ್ಸಿಬಿ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಬಹಿರಂಗ ಪಡಿಸಿದೆ.
ಮುಂಬೈ (ಮಹಾರಾಷ್ಟ್ರ): 2022ರ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಆವೃತ್ತಿಗೆ ಮುನ್ನವೇ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ಸಿಬಿ) ತಂಡವನ್ನು ಸೇರಿಕೊಂಡಿದ್ದಾರೆ. ಭಾರತದ ಕ್ರಿಕೆಟ್ ತಂಡದ ಮಾಜಿ ನಾಯಕರಾದ ಕೊಹ್ಲಿ ಬಗ್ಗೆ ಆರ್ಸಿಬಿ ಅಭಿಮಾನಿಗಳಲ್ಲಿ ಸಾಕಷ್ಟು ಕುತೂಹಲ ಮೂಡಿತ್ತು.
ಇದರ ನಡುವಯೇ ಆರ್ಸಿಬಿ ತನ್ನ ಟ್ವಿಟರ್ ಖಾತೆಯಲ್ಲಿ ವಿರಾಟ್ ಕೊಹ್ಲಿ ತಂಡ ಸೇರಿರುವ ಬಗ್ಗೆ ಮಾಹಿತಿ ಹಂಚಿಕೊಂಡಿದೆ. ‘ಕಿಂಗ್ ಕೊಹ್ಲಿಯ ಆಗಮನವಾಗಿದೆ. ಇದುವೇ ಈಗ ದೊಡ್ಡ ಸುದ್ದಿ’ ಎಂದು ಆರ್ಸಿಬಿ ಅಧಿಕೃತವಾಗಿ ತನ್ನ ಟ್ವಿಟರ್ ಖಾತೆಯಲ್ಲಿ ಬಹಿರಂಗ ಪಡಿಸಿದೆ.