ಪಶ್ಚಿಮ ಬಂಗಾಳದ ಬಿರ್ಭೂಮ್ ಜಿಲ್ಲೆಯ ಬೊಗ್ಟುಯಿ ಗ್ರಾಮದಲ್ಲಿ ಸಜೀವ ದಹನವಾದ ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ ಎಂಟು ಜನರ ಕಗ್ಗೊಲೆಗೂ ಮುನ್ನ ಮನಬಂದಂತೆ ತಳಿಸಲಾಗಿದೆ ಎಂದು ಅವರ ಮರಣೋತ್ತರ ಪರೀಕ್ಷೆಯಿಂದ ತಿಳಿದುಬಂದಿದೆ.ಮಂಗಳವಾರ ಮುಂಜಾನೆ ಅಪರಿಚಿತರಿಂದ ಬೆಂಕಿ ಹಚ್ಚಲಾಗಿದೆ ಎಂದು ಹೇಳಲಾದ ಮನೆಗಳಲ್ಲಿ ದೊರೆತ ಸುಟ್ಟ ಶವಗಳ ಮರಣೋತ್ತರ ಪರೀಕ್ಷೆ ನಡೆಸಿದ ವಿಧಿ ವಿಜ್ಞಾನ ಪ್ರಯೋಗಾಲಯ ತಂತ್ರಜ್ಞರ ಪ್ರಕಾರ, ಸಂತ್ರಸ್ತರನ್ನು ಮೊದಲು ಮನ ಬಂದಂತೆ ಥಳಿಸಿ, ಆನಂತರ ಜೀವಂತವಾಗಿ ಸುಟ್ಟು ಹಾಕಲಾಗಿದೆ ಎಂದು ರಾಮ್ ಹರತ್ ಪುರ ಆಸ್ಪತ್ರೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada