ಇಮೇಲ್ ಮೂಲಕ ಬಾಂಬ್ ಸ್ಪೋಟದ ಬೆದರಿಕೆ ಬಂದ ಹಿನ್ನೆಲೆಯಲ್ಲಿ ರಾಷ್ಟ್ರ ರಾಜಧಾನಿ ದೆಹಲಿ ಮತ್ತು ಉತ್ತರಪ್ರದೇಶದಲ್ಲಿ ಹೆಚ್ಚಿನ ನಿಗಾ ವಹಿಸಲಾಗಿದೆ. ಬೆದರಿಕೆಯ ಹಿನ್ನೆಲೆಯಲ್ಲಿ ದೆಹಲಿಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪೊಲೀಸರು ಅಲರ್ಟ್ ಆಗಿದ್ದಾರೆ
ಬೆದರಿಕೆಯಿಂದಾಗಿ ಸ್ಥಳೀಯ ಪೊಲೀಸರು ಸರೋಜಿನಿ ನಗರ ಮಾರುಕಟ್ಟೆಯನ್ನು ಭದ್ರತಾ ದೃಷ್ಟಿಯಿಂದ ಮೊದಲೇ ಮುಚ್ಚಿದ್ದಾರೆ. ಇಮೇಲ್ ಕಳುಹಿಸಿರುವ ವ್ಯಕ್ತಿ ತೆಹ್ರೀಕ್-ಎ-ತಾಲಿಬಾನ್ ಇಂಡಿಯಾ ಸಂಘಟನೆಯೊಂದಿಗೆ ಸಂಬಂಧ ಹೊಂದಿರವುದಾಗಿ ಹೇಳಿಕೊಂಡಿದ್ದಾನೆ.ಆತನ ಪತ್ತೆಗೆ ತನಿಖೆ ಆರಂಭಿಸಲಾಗಿದೆ ಎಂದು ದೆಹಲಿ ಪೊಲೀಸ್ ವಿಶೇಷ ಘಟಕದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.