ಡಾ.ಸುಧಾಕರ್ ಆಯೋಜಿಸಿದ್ದ ಭೋಜನಕೂಟಕ್ಕೆ ಬಿಜೆಪಿಯವರೇ ಗೈರು.

ಮೂಲ ಬಿಜೆಪಿಗರು ಮತ್ತು ವಲಸಿಗರು ಎನ್ನುವ ಚರ್ಚೆ ಪಕ್ಷದಲ್ಲಿ ಇದೇನು ಮೊದಲಲ್ಲ. ಹಿರಿಯ ಸಚಿವ ಕೆ.ಎಸ್.ಈಶ್ವರಪ್ಪ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಹಲವು ಬಾರಿ ಬಹಿರಂಗವಾಗಿಯೇ ಈ ಬಗ್ಗೆ ಮಾತನಾಡಿದ್ದರು.

ನಾವು ಬಂದಿದ್ದರಿಂದಲೇ ನೀವು ಸಚಿವರಾಗಿರುವುದು ಎಂದು ಬಾಂಬೆ ಫ್ರೆಂಡ್ಸ್ ಅದಕ್ಕೆ ಕೌಂಟರ್ ಅನ್ನೂ ಕೊಡುತ್ತಿದ್ದರು.

ಈ ವಿಚಾರ ಇತ್ತೀಚಿನ ದಿನಗಳಲ್ಲಿ ಪಕ್ಷದೊಳಗೆ ಅಷ್ಟೇನೂ ಚರ್ಚೆಯಾಗುತ್ತಿರಲಿಲ್ಲ. ಕಾರಣ, ದೊಡ್ಡವರ ಖಡಕ್ ಎಚ್ಚರಿಕೆ.

ಯಡಿಯೂರಪ್ಪನವರ ಸರಕಾರ ಅಧಿಕಾರಕ್ಕೆ ಬಂದ ದಿನದಿಂದಲೂ ನಮಗೆ ಏನು ಬೇಕು ಅದನ್ನು ಸಾಧಿಸುತ್ತಿದ್ದವರು ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಎನ್ನುವುದು ಬಿಜೆಪಿಯೊಳಗೆಯೇ ಆಡಿಕೊಳ್ಳಲಾಗುತ್ತಿರುವ ಮಾತುಗಳು. ಇವರಿಗೆ ಮತ್ತು ಕೆಲವೊಂದು ಮೂಲ ಬಿಜೆಪಿಯವರಿಗೆ ಅಷ್ಟಕಷ್ಟೇ ಎನ್ನುವ ಮಾತುಗಳೂ ಕೇಳಿ ಬರುತ್ತಿದ್ದವು.

ಈಗ ಆರೋಗ್ಯ ಸಚಿವರ ಮೇಲೆ ಮುನಿಸಿಕೊಂಡಿರುವ ಬಿಜೆಪಿ ಮುಖಂಡರು, ಅವರು ಆಯೋಜಿಸಿದ್ದ ಭೋಜನಕೂಟಕ್ಕೆ ಗೈರಾಗುವ ಮೂಲಕ ತಮ್ಮ ಅಸಮಾಧಾನ ಹೊರಹಾಕಿದ್ದು ಒಂದು ಕಡೆ. ಇನ್ನೊಂದು ಕಡೆ ಬಿಜೆಪಿಯಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಜಗಜ್ಜಾಹೀರಾಗಿದೆ.

ವಿಧಾನಸೌಧದ ಬಾಂಕ್ವೆಟ್ ಹಾಲ್ ನಲ್ಲಿ ಆರೋಗ್ಯ ಸಚಿವ ಡಾ.ಸುಧಾಕರ್ ಅವರು ಸಚಿವರು ಮತ್ತು ಶಾಸಕ ಮಿತ್ರರಿಗೆ ಬಾಳೆಎಲೆ ಭೋಜನಕೂಟ ಆಯೋಜಿಸಿದ್ದರು. ವೆಜ್ ಮತ್ತು ನಾನ್ ವೆಜ್ ಎರಡೂ ವ್ಯವಸ್ಥೆಗಳಿದ್ದವು. ಕಾಂಗ್ರೆಸ್ ಮತ್ತು ಜೆಡಿಎಸ್ಸಿನ ಹೆಚ್ಚಿನ ಶಾಸಕರು ಇದರಲ್ಲಿ ಭಾಗವಹಿಸಿದ್ದರು. ಆದರೆ, ಬಿಜೆಪಿಯ ಸುಮಾರು ಮೂವತ್ತಕ್ಕೂ ಹೆಚ್ಚು ಶಾಸಕರು ಭೋಜನಕೂಟದಲ್ಲಿ ಗೈರಾಗಿ, ಸುಧಾಕರ್ ವಿರುದ್ದ ತಮ್ಮ ಅಸಮಾಧಾನವನ್ನು ಬಹಿರಂಗವಾಗಿಯೇ ಹೊರಹಾಕಿದ್ದಾರೆ.

ಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಶಾಸಕರು ಭೋಜನಕೂಟದಿಂದ ದೂರಎಂ.ಪಿ.ರೇಣುಕಾಚಾರ್ಯ ನೇತೃತ್ವದಲ್ಲಿ ಶಾಸಕರು ಭೋಜನಕೂಟದಿಂದ ದೂರ ಉಳಿದಿದ್ದಾರೆ. ಬಿ.ಸಿ.ನಾಗೇಶ್, ರಾಜೂಗೌಡ, ಸತೀಶ್ ರೆಡ್ಡಿ, ಸುರೇಶ್ ಕುಮಾರ್, ರವಿ ಸುಬ್ರಮಣ್ಯ, ಅರವಿಂದ್ ಲಿಂಬಾವಳಿ, ಅರವಿಂದ್ ಬೆಲ್ಲದ್, ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ಮೂವತ್ತಕ್ಕೂ ಹೆಚ್ಚು ಬಿಜೆಪಿ ಶಾಸಕರು ಭೋಜನಕೂಟದಲ್ಲಿ ಭಾಗವಹಿಸಲಿಲ್ಲ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಇನ್‌ಸ್ಟಾಗ್ರಾಂನಲ್ಲಿ ನಾಗಚೈತನ್ಯರನ್ನು ಅನ್ ಫಾಲೋ ಮಾಡಿದ ನಟಿ ಸಮಂತಾ.

Thu Mar 24 , 2022
  ದಕ್ಷಿಣ ಭಾರತದ ತಾರಾ ಜೋಡಿಯಾಗಿದ್ದ ಸಮಂತಾ ಮತ್ತು ನಾಗಚೈತನ್ಯ, ತಮ್ಮ ನಾಲ್ಕನೇ ವರ್ಷದ ವಿವಾಹ ವಾರ್ಷಿಕೋತ್ಸವಕ್ಕೂ ಮೊದಲೇ ವಿಚ್ಛೇದನ ಪಡೆದಿರುವ ವಿಚಾರ ಎಲ್ಲರಿಗೂ ಗೊತ್ತೇ ಇದೆ.ಇದೀಗ ನಟಿ, ಇನ್‌ಸ್ಟಾಗ್ರಾಂ ಖಾತೆಯಲ್ಲಿ ಮಾಜಿ ಪತಿ ನಾಗಚೈತನ್ಯರನ್ನು ಅನ್‌ಫಾಲೋ ಮಾಡಿದ್ದಾರೆ ಆ ಮೂಲಕ ಮಾಜಿ ಪತಿಯೊಂದಿಗಿದ್ದ ಎಲ್ಲ ಸಂಬಂಧಗಳಿಗೂ ಬ್ರೇಕ್‌ ಹಾಕಿದ್ದಾರೆ ಎನ್ನಲಾಗಿದೆ. ಈ ಹಿಂದೆ ನಟಿ, ಇನ್‌ಸ್ಟಾಗ್ರಾಂನಲ್ಲಿ ಪತಿಯೊಂದಿಗಿರುವ ಫೋಟೋಗಳನ್ನು ಮತ್ತು ವಿಚ್ಛೇದನದ ಬಗ್ಗೆ ಮಾಹಿತಿ ಕೊಟ್ಟಿದ್ದ ಪೋಸ್ಟ್‌ ಡಿಲೀಟ್‌ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: