ರಾಜಧಾನಿಯಲ್ಲಿ ಮಲ್ಲೇಶ್ವರದ ಬಾಲಕಿಯರ ಸರ್ಕಾರಿ ಪ್ರೌಢಶಾಲೆಯಲ್ಲಿ ಬುಧವಾರ ವಿದ್ಯಾರ್ಥಿಗಳಿಗೆ ರೋಬೋವೋಂದು ಪಾಠ ಮಾಡಿದೆ. ಕ್ಷೇತ್ರದ ಶಾಸಕರು ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ ಅಶ್ವಥ್ ನಾರಾಯಣ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಿತು.ಶಾಲೆಯ ಬೊಧಕರು ಮತ್ತು ವಿದ್ಯಾರ್ಥಿನಿಯರು ಪಾಲ್ಗೊಂಡು ರೋಬೋ ದ ಕಾರ್ಯಕ್ಷಮತೆಗೆ ಸಾಕ್ಷಿಯಾದರು ಈ ಸಂದರ್ಭದಲ್ಲಿ ರೋಬೊಗೆ ಹಲವು ಪ್ರಶ್ನೆಗಳನ್ನು ಕೇಳಿ ಅದು ನೀಡಿದ ಉತ್ತರ ಮತ್ತು ಬೋಧನಾ ವ್ಯವಸ್ಥೆಗೆ ನೀಡಿದ ನೆರವನ್ನು ಕಂಡು ಬೆರಗಾದರು.
ಸರಕಾರಿ ಶಾಲಾ ಕಾಲೇಜುಗಳು ಕೂಡ ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಕಡಿಮೆಯಿಲ್ಲದಂತೆ ವಿದ್ಯಾರ್ಥಿಗಳನ್ನು ಆಕರ್ಷಿಸಬಹುದು. ಇದರಿಂದ ಬಡ ಕುಟುಂಬಗಳ ಮಕ್ಕಳಿಗೆ ಹೆಚ್ಚಿನ ಅನುಕೂಲವಾಗಲಿದೆ. ಮುಂದಿನ ದಿನಗಳಲ್ಲಿ ಸಿಎಂ ಬಸವರಾಜ ಬೊಮ್ಮಯಿ ಅವರಿಗೆ ತೋರಿಸಲಾಗುವುದು ಎಂದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada