ಗ್ರಾಮೀಣಾಭಿವೃದ್ದಿ ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ. ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣ ಉಡುಪಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲು, ದೂರಿನಲ್ಲಿ ಆತ್ಮಹತ್ಯೆಗೆ ಕಾರಣ ತಿಳಿಸಿರುವ ಪ್ರಶಾಂತ್ ಪಾಟೀಲ್, ಹಿಂಡಾಲಗಾ ಪಂಚಾಯತ್ ವ್ಯಾಪ್ತಿಯ ಲಕ್ಷ್ಮಿದೇವಿ ಜಾತ್ರೆ ಹಿನ್ನಲೆಯಲ್ಲಿ ಗ್ರಾಮದ ಅಭಿವೃದ್ದಿ ಕೆಲಸ ಮಾಡಿದ್ದ.೪ ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ, ಚರಂಡಿ, ಫೇವರ್ಸ ಜೋಡಣೆ, ಕಾಮಗಾರಿ ಮಾಡಿಸಿದ್ದ. ಈ ಹಣವನ್ನು ಬಿಡುಗಡೆ ಮಾಡಲು ಕೇಳಿದಾಗ ಸಚಿವ ಈಶ್ವರಪ್ಪ ಶೇ.೪೦% ಕಮಿಷನ್ಗೆ ಬೇಡಿಕೆ ಇಟ್ಟಿದ್ದರು ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.
ಮೃತ ಸಂತೋಷ್ ಪಾಟೀಲ್ ಅವರ ಸಹೋದರ ಪ್ರಶಾಂತ್ ಪಾಟೀಲ್ ತಡರಾತ್ರಿ 2.20ರ ಸುಮಾರಿಗೆ ಉಡುಪಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಕಾಲಂ 306 ರ ಅಡಿಯಲ್ಲಿ ಈಶ್ವರಪ್ಪ ಮತ್ತು ಅವರ ಆಪ್ತ ಸಹಾಯಕರಾದ ಬಸವರಾಜ್, ರಮೇಶ್ ಮತ್ತಿತರರ ಮೇಲೆ ಪ್ರಕರಣ ದಾಖಲಿಸಿದ್ದಾರೆ.
ಸಚಿವ ಕೆ.ಎಸ್ ಈಶ್ವರಪ್ಪ ವಿರುದ್ದ 40% ಕಮಿಷನ್ ಆರೋಪ ಮಾಡಿದ್ದ ಗುತ್ತಿಗೆದಾರ ಸಂತೋಷ್ ಪಾಟೀಲ್, ತಮ್ಮ ಆರೋಪ ಭಾರಿ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದೀಗ ಅವರ ಮರಣ ಪತ್ರ ಸಾಕಷ್ಟು ಸದ್ದು ಮಾಡ್ತಿದೆ. ಸಾವಿಗೂ ಮುನ್ನ ತಮ್ಮ ಮರಣ ಸಂದೇಶವನ್ನು ಮೊಬೈಲ್ ಮೂಲಕ ಕಳಿಸಿರುವ ಸಂತೋಷ್ ಪಾಟೀಲ್, ಉಡುಪಿಯ ಕೆ ಎಸ್ ಆರ್ ಟಿ ಸಿ ಬಸ್ ನಿಲ್ದಾಣ ಸಮಿಪದ ಶಾಂಭವಿ ಲಾಡ್ಜ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada