ಗೋವಾದ ಮುಖ್ಯಮಂತ್ರಿಯಾಗಿ ಪ್ರಮೋದ್ ಸಾವಂತ್ ಅವರು ಮಾರ್ಚ್ 28 ರಂದು ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ. ಸಮಾರಂಭದಲ್ಲಿಸುದ್ದಿಗಾರರೊಂದಿಗೆ ಮಾತನಾಡಿದ ಸಾವಂತ್ , ಮಾರ್ಚ್ 28 ರಂದು ಬೆಳಿಗ್ಗೆ 11 ಗಂಟೆಗೆ ಇಲ್ಲಿನ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಸಮಾರಂಭ ನಡೆಯಲಿದೆ.
ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಬಿಜೆಪಿಆಡಳಿತವಿರುವ ಏಳು ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ಹೇಳಿದರು.
ಪಶ್ಚಿಮ ಬಂಗಾಳದ ಭಿರ್ಭೂಮ್ ಜಿಲ್ಲೆಯ ರಾಮ್ಪುರಹತ್ನಲ್ಲಿ ಇಂದು ಮುಂಜಾನೆ ಮನೆಗಳಿಗೆ ಬೆಂಕಿ ತಗುಲಿದ ಪರಿಣಾಮ 8 ಮಂದಿ ಸಾವನಪಿರುವ ಘಟಣೆ ಇಂದು ನಡೆದಿದೆ. ಬೆಂಕಿ ತಗುಲಿದ್ದ ಮನೆಯೊಂದರಲ್ಲಿ 8 ಸುಟ್ಟ ದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ. ನಿನ್ನೆ ಮುಂಜಾನೆ ತೃಣಮೈಲ ಕಾಂಗ್ರೆಸ್ನ ಪಂಚಾಯತ್ತಿ ಮಟ್ಟದ ನಾಯಕನ ಹತ್ಯೆ ನಡೆದ ಬಳಿಕ ಈ ಘಟನೆ ನಡೆದಿದೆ ಎಂದು ಡಿಜಿಪಿ ಮನೋಜ್ ಮಾಳವಿಯಾ ಕೋಲ್ಕತ್ತಾದಲ್ಲಿ ಮಾಹಿತಿ ನೀಡಿದ್ದಾರೆ. ಪರಿಸ್ಥಿತಿಯು ಈಗ ನಿಯಂತ್ರಣದಲ್ಲಿದೆ, ನಿನ್ನೆ ರಾತ್ರಿಯಿಂದ ಗ್ರಾಮದಲ್ಲಿ […]