ನಿರ್ದೇಶಕ ಪ್ರೀತಂ ಗುಬ್ಬಿ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಕಾಂಬಿನೇಷನ್ ನಲ್ಲಿ ಮತ್ತೊಂದು ಸಿನಿಮಾ ಸೆಟ್ಟೇರಲಿದೆ ಎಂಬ ಮಾಹಿತಿ ಹೊರಬಿದ್ದಿದೆ. ಈ ಕಾಂಬಿನೇಷನ್ ನ 4ನೇ ಸಿನಿಮಾ ಇದಾಗಿದೆ.ಮಳೆಯಲಿ ಜೊತೆಯಲಿ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿತ್ತು.
ಆನಂತರ ‘ದಿಲ್ ರಂಗೀಲಾ’ ಆಗಿ ತೆರೆಯ ಮೇಲೆ ಕಾಣಿಸಿಕೊಂಡಿತ್ತು. ಈ ಎರಡು ಸಿನಿಮಾಗಳು ಬಾಕ್ಸ್ ಆಫೀಸ್ ನಲ್ಲಿ ಸಖತ್ ಸದ್ದು ಮಾಡಿದ್ದವು. ಈ ಕಾಂಬಿನೇಷನ್ ನ ಕೊನೆಯ ಸಿನಿಮಾ ’99’. ಇದಾದ ನಂತರ ಪ್ರೀತಂ ಮತ್ತು ಗಣೇಶ್ ಒಟ್ಟಾಗಿ ಮತ್ತೆ ಸಿನಿಮಾ ಮಾಡುತ್ತಿದ್ದಾರೆ.
ಸಾಮಾನ್ಯವಾಗಿ ಪ್ರೀತಂ ಸಿನಿಮಾಗಳೆಂದರೆ, ಅಲ್ಲೊಂದು ಲವ್ ಸ್ಟೋರಿ ಇದ್ದೇ ಇರುತ್ತದೆ. ಹಾಗಾಗಿ ಈ ಸಿನಿಮಾದಲ್ಲೂ ಅಪರೂಪದ ಪ್ರೇಮಕಥೆಯನ್ನು ಹೇಳಲಿದ್ದಾರಂತೆ ನಿರ್ದೇಶಕರು. ‘ಮುಂಗಾರು ಮಳೆ’ ಸಿನಿಮಾದ ಮೂಲಕ ಈ ಜೋಡಿ ಒಂದಾಗಿ ಕೆಲಸ ಮಾಡುತ್ತಿದ್ದರೂ, ಮುಂಗಾರು ಮಳೆಗೆ ಪ್ರೀತಂ ಕೇವಲ ಕಥೆಗಾರ ಆಗಿದ್ದರು.
ಇತ್ತ ಗಣೇಶ್ ಕೂಡ ಹಲವು ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅಲ್ಲದೇ, ಗೋಲ್ಡನ್ ಗ್ಯಾಂಗ್ ಟಾಕ್ ಶೋ ಒಂದನ್ನು ನಡೆಸಿಕೊಡುತ್ತಿದ್ದಾರೆ. ಗಾಳಿಪಟ 2 ಸಿನಿಮಾ ರಿಲೀಸ್ ಗೆ ಸಿದ್ಧವಾಗಿದ್ದರೆ, ತ್ರಿಬಲ್ ರೈಡಿಂಗ್ ಕೂಡ ಶೂಟಿಂಗ್ ಮುಗಿಸಿಕೊಂಡಿದೆ.