13 ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿದ ಆರೋಪದ ಅಡಿಯಲ್ಲಿ ಮಹಾರಾಷ್ಟ್ರದ ಆಂಟೋಪ್ ಹಿಲ್ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಅಪ್ರಾಪ್ತೆಯ ನೆರೆ ಮನೆಯಾತನೇ ಆಗಿದ್ದ ಈತ ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ಬಾಲಕಿಯ ಮನೆಗೆ ನುಗ್ಗುತ್ತಿದ್ದ ಈತ ನಿರಂತರ ಅತ್ಯಾಚಾರವೆಸಗುತ್ತಿದ್ದ ಎನ್ನಲಾಗಿದೆ. ಆದರೆ ಬಾಲಕಿಗೆ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಬಾಲಕಿಯ ಕುಟುಂಬಸ್ಥರು ಆಸ್ಪತ್ರೆಗೆ ಕರೆದುಕೊಂಡು ಹೋದ ಬಳಿಕ ಆಕೆ ಐದು ತಿಂಗಳ ಗರ್ಭಿಣಿ ಎಂಬ ವಿಚಾರ ಬೆಳಕಿಗೆ ಬಂದೆ. ಈ ಬಗ್ಗೆ ಆರೋಪಿಗೆ ಮಾಹಿತಿ ತಿಳಿಯುತ್ತಿದ್ದಂತೆಯೇ ಆತ ತಲೆಮರೆಸಿಕೊಂಡಿದ್ದಾನೆ. ಆದರೆ ಶೋಧ ಕಾರ್ಯ ಚುರುಕುಗೊಳಿಸಿದ ಪೊಲೀಸರು ಮೀರಾ ರೋಡ್ನಲ್ಲಿ ಆರೋಪಿಯನ್ನು ಬಂಧಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada