ಶಿವಮೊಗ್ಗದಲ್ಲಿ ಕೆಲ ದಿನಗಳ ಹಿಂದೆ ಭಜರಂಗದಳದ ಕಾರ್ಯಕರ್ತ ಹರ್ಷ ( Harsha Murder Case ) ಎಂಬಾತನನ್ನು ಹತ್ಯೆ ಮಾಡಲಾಗಿತ್ತು. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಆದೇಶಿಸಬೇಕು, ಎನ್ಐಎ ತನಿಖೆಗೆ ( NIA Investigation ) ವಹಿಸಬೇಕು ಎಂಬುದಾಗಿ ಆಡಳಿತ, ಪ್ರತಿಪಕ್ಷದ ನಾಯಕರು ಒತ್ತಾಯಿಸಿದ್ದರು.
ಈ ಬಳಿಕ, ಇದೀಗ ರಾಜ್ಯ ಸರ್ಕಾರ ಹರ್ಷ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ, ರಾಜ್ಯ ಸರ್ಕಾರ ( Karnataka Government ) ಆದೇಶಿಸಿದೆ.
ಈ ಸಂಬಂಧ ರಾಜ್ಯ ಗೃಹ ಇಲಾಖೆಯಿಂದ ಆದೇಶ ಹೊರಡಿಸಿದ್ದು, ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದ ತನಿಖೆಯನ್ನು ಎನ್ಐಎ ಅಧಿಕಾರಿಗಳು ನಡೆಸುವಂತೆ ಆದೇಶಿಸಿದೆ. ಈ ಮೂಲಕ ಎನ್ಐಎ ತನಿಖೆಗೆ ವರ್ಗಾಹಿಸಿದೆ.
ಅಂದಹಾಗೇ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೂಡ, ಹರ್ಷ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸುವಂತೆ ಆಗ್ರಹಿಸಿದ್ದರು. ಈ ಬೆನ್ನಲ್ಲೇ, ರಾಜ್ಯ ಸರ್ಕಾರ ಈಗ ಹರ್ಷ ಹತ್ಯೆ ಪ್ರಕರಣವನ್ನು ಎನ್ಐಎ ತನಿಖೆಗೆ ವಹಿಸಿ ಆದೇಶಿಸಿದೆ.
ಈ ಹಿನ್ನಲೆಯಲ್ಲಿ ಪ್ರಕರಣ ಸಂಬಂಧ ತನಿಖೆ ನಡೆಸೋದಕ್ಕೆ ನಿನ್ನೆ ಸಂಜೆಯೇ ಶಿವಮೊಗ್ಗಕ್ಕೆ ಆಗಮಿಸಿರುವಂತ ಎನ್ಐಎ ತಂಡದ ಅಧಿಕಾರಿಗಳು, ಹರ್ಷ ಹತ್ಯೆ ಸಂಬಂಧ ವಿವಿಧ ಆಯಾಮಗಳಿಂದ ತನಿಖೆ ನಡೆಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada