ಹಿಂದೂಪರ ಸಂಘಟನೆ ಕಾರ್ಯಕರ್ತರಿಂದ 4 ಮುಸ್ಲಿಂ ಅಂಗಡಿಗಳ ತೆರವು.. ಹೆಚ್ ಡಿಕೆ ತೀವ್ರ ಖಂಡನೆ..!
ಧಾರವಾಡ ನುಗ್ಗಿಕೇರಿಯ ಶ್ರೀ ಆಂಜನೇಯ ಸ್ವಾಮಿ ದೇವಸ್ಥಾನದ ಬಳಿ ಮುಸ್ಲಿಂ ಅಂಗಡಿಗಳನ್ನು ಶ್ರೀರಾಮ ಸೇನೆ ಕಾರ್ಯಕರ್ತರು ಬಲವಂತವಾಗಿ ತೆರವು ಮಾಡಿಸಿದ್ದಾರೆ. ದೇವಸ್ಥಾನ ಬಳಿ ಆಗಮಿಸಿದ ಶ್ರೀರಾಮ ಸೇನೆಯ ಕಾರ್ಯಕರ್ತರು ಮುಸ್ಲಿಂ ಸಮುದಾಯಕ್ಕೆ ಸೇರಿದ ವ್ಯಾಪರಸ್ಥರೊಬ್ಬರ ಕಲ್ಲಂಗಡಿ ಹಣ್ಣುಗಳನ್ನು ಒಡೆಯುವ ಮೂಲಕ ಅಂಗಡಿ ಖಾಲಿ ಮಾಡಿಸಿದ್ದಾರೆ. 4 ಮುಸ್ಲಿಂ ವ್ಯಾಪಾರಿಗಳ ಕಲ್ಲಂಗಡಿಗಳನ್ನು ನಾಶ ಮಾಡಲಾಗಿದ್ದು, ಇದರ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ದಾಂಧಲೆ ಬಗ್ಗೆ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತೀವ್ರವಾಗಿ ಖಂಡಿಸಿದ್ದಾರೆ. ಈ ಘಟನೆ ಮಾಡಿರುವವರು ವಿರುದ್ಧ ಅವರು ಭಯೋತ್ಪಾದಕರಿಗೂ ಇವರಿಗೂ ವ್ಯತ್ಯಾಸವಿಲ್ಲ. ಇವರನ್ನು ಕೂಡಲೇ ಬಂಧಿಸಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಅಂತ ಹೆಚ್ ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada