ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಹಿನ್ನೆಲೆ ಕಾಂಗ್ರೆಸ್ ನಾಯಕರು ಇಂದು ಮುಖ್ಯಮಂತ್ರಿಗಳ ನಿವಾಸಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದು, ಈ ಹಿನ್ನೆಲೆ ಸಿಎಂ ಮನೆಗೆ ಬಿಗಿ ಪೊಲೀಸ್ ಭದ್ರತೆ ಮಾಡಲಾಗಿದೆ. ಸಚಿವ ಕೆ.ಎಸ್. ಈಶ್ವರಪ್ಪನ ಬಂಧಿಸುವಂತೆ ಆಗ್ರಹಿಸಿ ಕಾಂಗ್ರೆಸ್ ನಾಯಕರು ಸಿಎಂ ಮನೆ ಮುತ್ತಿಗೆ ಹಾಕಲು ಯೋಜನೆ ಮಾಡಿಕೊಂಡಿದ್ದು, ಆರ್ ಟಿ ನಗರದ ಸಿಎಂ ಮನೆಗೆ ಪೊಲೀಸರು ಹೆಚ್ಚು ಭದ್ರತೆ ಒದಗಿಸಿದ್ದಾರೆ. ಬೆಳಿಗ್ಗೆ 10ಕ್ಕೆ ರೇಸ್ ಕೋರ್ಸ್ ರಸ್ತೆಯ ಕಾಂಗ್ರೆಸ್ ಭವನದಿಂದ ಗೃಹ ಕಚೇರಿ ಕೃಷ್ಣಾಕ್ಕೆ ಪಾದಯಾತ್ರೆ ಹಮ್ಮಿಕೊಂಡಿದ್ದು, ಬಳಿಕ ಗೃಹ ಕಚೇರಿ ಕೃಷ್ಣಾಕ್ಕೆ ಕಾಂಗ್ರೆಸ್ ನಾಯಕರು ಮುತ್ತಿಗೆ ಹಾಕಲಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada