ಪತ್ನಿಯೇ ತನ್ನ ಪತಿ ವಿರುದ್ಧ ಅತ್ಯಾಚಾರದ ದೂರು ದಾಖಲಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಒಡಿಶಾ ಮೂಲದ ಮಹಿಳೆ ತನ್ನ ಗಂಡನ ವಿರುದ್ಧ ಈಗ ಹೈಕೋರ್ಟ್ ಮೆಟ್ಟಿಲೇರಿದ್ದಾಳೆ.
ಗಂಡ, ಹೆಂಡತಿ ನಡುವೆ ಕೌಟುಂಬಿಕ ಕಲಹ ಏರ್ಪಟ್ಟಿದೆ. ಇದೀಗ ಜಗಳ ವಿಪರೀತಕ್ಕೆ ತಿರುಗಿ ಗಂಡನ ವಿರುದ್ಧವೇ ಹೆಂಡತಿ ದೂರು ದಾಖಲಿಸಿದ್ದಾಳೆ. ಈ ಕೇಸ್ನ ವಿಚಾರಣೆ ಕೈಗೆತ್ತಿಕೊಂಡ ಹೈಕೋರ್ಟ್, ಮಹತ್ವದ ಆದೇಶ ನೀಡಿದೆ. ಹಾಗಿದ್ರೆ ಏನಿದು ಪ್ರಕರಣ, ಈ ಕೇಸ್ನಲ್ಲಿ ಹೈಕೋರ್ಟ್ ಹೇಳಿದ್ದೇನು? ಗಂಡ ಹೆಂಡತಿ ಒಟ್ಟಿಗೆ ಬಾಳಲು ಸಾಧ್ಯವೇ ಇಲ್ಲದ ಪರಿಸ್ಥಿತಿ ನಿರ್ಮಾಣವಾಗಿದೆ. ಆದರೆ ಈಗ ಹೆಂಡತಿ, ತನ್ನ ಗಂಡನ ವಿರುದ್ಧವೇ ಅತ್ಯಾಚಾರದ ದೂರು ದಾಖಲಿಸಿದ್ದಾಳೆ. ಪೂರ್ವ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಅಸ್ವಾಭಾವಿಕ ಲೈಂಗಿಕ ಕ್ರಿಯೆ ಹಾಗೂ ಅತ್ಯಾಚಾರದ ಆರೋಪ ಮಾಡಿದ್ದರು. ಅಲ್ಲದೆ, ಪತಿಯು ತನ್ನನ್ನು ಲೈಂಗಿಕ ಗುಲಾಮಳಂತೆ ನಡೆಸಿಕೊಂಡಿದ್ದಲ್ಲದೆ, ಅಪ್ರಾಪ್ತ ಮಗಳ ಮೇಲೂ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರಿದ್ದರು.
ಪ್ರಕರಣವೊಂದರ ವಿಚಾರಣೆ ನಡೆಸಿದ ಹೈಕೋರ್ಟ್, ಪತ್ನಿಇಚ್ಛೆಗೆ ವಿರುದ್ಧವಾಗಿ ಲೈಂಗಿಕ ದೌರ್ಜನ್ಯ ಎಸಗುವುದು ಅತ್ಯಾಚಾರ ಎಂಬುದಾಗಿ ಪರಿಗಣಿಸಲ್ಪಡುತ್ತದೆ. ವೈವಾಹಿಕ ಅತ್ಯಾಚಾರ ಪ್ರಕರಣಗಳಲ್ಲಿ ಪತಿಗೆ ನೀಡುವ ವಿನಾಯಿತಿ ರದ್ದುಪಡಿಸುವ ಬಗ್ಗೆ ಶಾಸಕಾಂಗ ಯೋಚಿಸುವುದು ಸೂಕ್ತ ಎಂದು ಹೈಕೋರ್ಟ್ ಸಲಹೆ ನೀಡಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada