ರೋಹಿಣಿ ಸಿಂಧೂರಿ ಅವರು ಮೈಸೂರು ಜಿಲ್ಲಾಧಿಕಾರಿಯಾಗಿದ್ದಾಗ ನಡೆದಿದ್ದ ಬಟ್ಟೆ ಬ್ಯಾಗ್ ಖರೀದಿ ಹಗರಣದ ತನಿಖೆಗೆ ಕರ್ನಾಟಕ ಸರ್ಕಾರ ಆದೇಶಿಸಿದೆ. ಶಾಸಕ ಸಾ.ರಾ.ಮಹೇಶ್ ಈ ಹಗರಣವನ್ನು ಬಯಲಿಗೆ ಎಳೆದಿದ್ದರು.
ನಗರಸಭೆ, ಪುರಸಭೆ ಮತ್ತು ಮಹಾನಗರಪಾಲಿಕೆಗಳ ಪೂರ್ವಾನುಮತಿಯಿಲ್ಲದೆ ದುಬಾರಿ ಬೆಲೆಗೆ ಬ್ಯಾಗ್ಗಳನ್ನು ಖರೀದಿಸಲಾಗಿತ್ತು ಎಂದು ಮಹೇಶ್ ದೂರಿದ್ದರು. ಚಿಲ್ಲರೆ ಮಾರುಕಟ್ಟೆಯಲ್ಲಿ ₹ 10ರಿಂದ ₹ 13ಕ್ಕೆ ಸಿಗುವ ಬ್ಯಾಗ್ಗಳನ್ನು ಜಿಲ್ಲಾಧಿಕಾರಿ ₹ 52 ನೀಡಿ ಖರೀದಿಸಿದ್ದರು. ಸಾರ್ವಜನಿಕ ಹಣವನ್ನು ವೃಥಾ ವ್ಯರ್ಥ ಮಾಡಲಾಗಿದೆ ಎಂದು ಶಾಸಕ ಸಾ.ರಾ.ಮಹೇಶ್ ಅರೋಪಿಸಿದ್ದರು. ರೋಹಿಣಿ ಸಿಂಧೂರಿ ಅವರು 14.71 ಲಕ್ಷ ಬಟ್ಟೆ ಬ್ಯಾಗ್ಗಳನ್ನು ₹ 14 ಕೋಟಿ ಮೊತ್ತಕ್ಕೆ ಖರೀದಿಸಿದ್ದರು. ಕೈಮಗ್ಗ ನಿಗಮದ ಬದಲು ಖಾಸಗಿ ವ್ಯಕ್ತಿಗೆ ಟೆಂಡರ್ ನೀಡುವ ಮೂಲಕ ರೋಹಿಣಿ ಕಿಕ್ಬ್ಯಾಕ್ ಪಡೆದಿದ್ದಾರೆ. ಈ ಹಗರಣದಲ್ಲಿ ₹ 6.18 ಕೋಟಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದರು.