ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ಆರ್ ಆರ್ ಆರ್ ಚಿತ್ರ ಮಾರ್ಚ್ 25ರಂದು ವಿಶ್ವದ್ಯಾಂತ ತೆರೆಕಾಣಲಿದೆ.ಈ ಸಿನಿಮಾಗೆ ಕರ್ನಾಟಕದಲ್ಲಿ ಅದ್ದೂರಿಯಾಗಿ ಇವೆಂಟ್ ಮಾಡಲು ತೀರ್ಮಾನಿಸಲಾಗಿದೆ.ಇದಕ್ಕಾಗಿ ಚಿಕ್ಕಬಳ್ಳಾಪುರದಲ್ಲಿ ಬೃಹತ್ ವೇದಿಕೆ ಸಿದ್ಧವಾಗಿದ್ದು.ಈ ಕಾರ್ಯಕ್ರಮ ವೀಕ್ಷಿಸಲು ಅಕ್ಕ-ಪಕ್ಕದ ರಾಜ್ಯಗಳಿಂದಲೂ ಅಭಿಮಾನಿಗಳು ಆಗಮಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ನಿರ್ದೇಶಕ ರಾಜಮೌಳಿ,ನಟರಾದ ರಾಮ್ ಚರಣ್,ಜ್ಯೂ,ಎನ್ ಟಿಆರ್ ,ನಟಿ ಆಲಿಯಾ ಭಟ್ ಮುಂತಾದವರು ಈ ಕಾರ್ಯಕ್ರಮಕ್ಕೆ ಭಾಗಿ ಆಗಲಿದ್ದಾರೆ.ವಿಶೇಷವೆಂದರೆ ದಿವಂಗತ ನಟ ಡಾ.ಪುನೀತ್ ರಾಜ್ ಕುಮಾರ್ ರವರಿಗೆ ಈ ಕಾರ್ಯಕ್ರಮ ವನ್ನು ಅರ್ಪಿಸಲಾಗುತ್ತದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.ನಟ ಶಿವರಾಜ್ ಕುಮಾರ್ ಕೂಡ ಪಾಲ್ಗೊಳ್ಳಲಿದ್ದಾರೆ.ಕರ್ನಾಟಕದಲ್ಲಿ ಕೆವಿಎನ್ ಪ್ರೊಡಕ್ಷನ್ ಸಂಸ್ಧೆಯು ಆರ್ ಆರ್ ಆರ್ ಸಿನಿಮಾದ ವಿತರಣೆ ಜವಾಬ್ದಾರಿಯನ್ನು ಪಡೆದಿದೆ.