ಸಂತೋಷ್ ಪಾಟೀಲ್ ಆತ್ಮಹತ್ಯೆ ಬೆನ್ನಲ್ಲಿಯೇ ಪ್ರತಿಪಕ್ಷ ಕಾಂಗ್ರೆಸ್ ಮುಖ್ಯಮಂತ್ರಿ ಬೊಮ್ಮಾಯಿ ಸರ್ಕಾರದ ವಿರುದ್ಧ ಮುಗಿಬಿದ್ದಿದೆ. ಈಶ್ವರಪ್ಪ ಅವರ ರಾಜೀನಾಮೆಯನ್ನು ಕೂಡಲೇ ಪಡೆಯಬೇಕು ಮತ್ತು ಅವರನ್ನು ಸಂಪುಟದಿಂದ ಕಿತ್ತೆಸೆಯಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದ್ದಾರೆ.
ನನ್ನ ಸಾವಿಗೆ ಗ್ರಾಮೀಣ ಸಚಿವ ಕೆ.ಎಸ್ ಈಶ್ವರಪ್ಪ ಅವರೇ ಕಾರಣ ಎಂದು ಡೆತ್ ನೋಟ್ ಬರೆದಿಟ್ಟು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಶರಣಾಗಿದ್ಧಾರೆ. ಇದು ಸಚಿವ ಕೆ.ಎಸ್ ಈಶ್ವರಪ್ಪ ಅವರಿಗೆ ಸಂಕಷ್ಟ ತಂದಿಟ್ಟಿದೆ. ಇನ್ನು 2-3 ತಿಂಗಳಿಂದ ರಾಜ್ಯದಲ್ಲಿ ಒಂದೊಂದೆ ವಿವಾದ ಹುಟ್ಟುತ್ತಿದ್ದು, ಬಿಜೆಪಿ ಸರ್ಕಾರಕ್ಕೆ ದೊಡ್ಡ ತಲೆನೋವಾಗಿತ್ತು. ವಿವಾದಗಳಿಗೆಲ್ಲಾ ಪ್ರತಿಕ್ರಿಯಿಸದೇ ಮೌನವಾಗಿದ್ದ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಕೆಂಡಕಾರಿತ್ತು. ಇದೀಗ ಸಂತೋಷ್ ಸಾವು, ಈಶ್ವರಪ್ಪ ಮೇಲಿನ ಗಂಭೀರ ಆರೋಪ, ಸಿಎಂ ಬೊಮ್ಮಾಯಿ ಅವರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ. ಈಶ್ವರಪ್ಪ ಅವರು ರಾಜೀನಾಮೆ ಕೊಡಲೇಬೇಕೆಂದು ಕಾಂಗ್ರೆಸ್ನವರು ಪಟ್ಟು ಹಿಡಿದಿದ್ದಾರೆ
ಸಂಪುಟದಿಂದ ಔಟ್ ಆಗ್ತಾರಾ ಈಶ್ವರಪ್ಪ?
ಚುನಾವಣೆ ಸಿದ್ದತೆಯ ಮೂಡ್ನಲ್ಲಿದ್ದ ಬಿಜೆಪಿ ನಾಯಕರಿಗೆ ದೊಡ್ಡ ಶಾಕ್ ಆಗಿದೆ. ಈಶ್ವರಪ್ಪ ವಿರುದ್ದ ಕೇಳಿ ಬಂದಿರೋ ಆರೋಪ ಸರ್ಕಾರಕ್ಕೆ ದೊಡ್ಡ ತಲೆನೋವಾಗಿದೆ. ಚುನಾವಣೆ ಸಿದ್ದತೆಯ ಪ್ರವಾಸದಲ್ಲಿದ್ದ ನಾಯಕರಿಗೆ ಈಗ ಈಶ್ವರಪ್ಪ ಕೇಸ್ ದೊಡ್ಡ ಸವಾಲಾಗಿ ಪರಿಣಮಿಸಿದೆ. ಸಿಎಂ ಬಸವರಾಜ್ ಬೊಮ್ಮಾಯಿ, ಗೃಹ ಸಚಿವ ಆರಗ ಜ್ಞಾನೇಂದ್ರಗೆ ನುಂಗಲಾರದ ತುತ್ತಾಗಿದೆ. ಕಾಂಗ್ರೆಸ್ ನಾಯಕರ ಆಗ್ರಹದಂತೆ ಈಶ್ವರಪ್ಪ ರನ್ನು ಸಂಪುಟದಿಂದ ವಜಾ ಮಾಡ್ತಾರಾ ಸಿಎಂ ಬಸವರಾಜ್ ಬೊಮ್ಮಾಯಿ ಅನ್ನೋ ಪ್ರಶ್ನೆ ಮೂಡಿದ್ದು, ಮುಂದಿನ ನಡೆ ಬಗ್ಗೆ ಕುತೂಹಲ ಹೆಚ್ಚಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada