ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಕೆಜಿಎಫ್ ಚಾಪ್ಟರ್-2 ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಏಪ್ರಿಲ್ 14ಕ್ಕೆ ಸಿನಿಮಾ ತೆರೆಗೆ ಅಪ್ಪಳಿಸಲಿದೆ. ಇದರ ನಡುವೆ ಕೆಜಿಎಫ್ ಚಿತ್ರತಂಡಕ್ಕೆ ಆತಂಕವೊಂದು ಎದುರಾಗಿದೆ.
ಅದಕ್ಕೆ ಕಾರಣ ಬಹುಭಾಷಾ ನಟ ಪ್ರಕಾಶ್ ರಾಜ್. ಅದು ಹೇಗೆ ಪ್ರಕಾಶ್ ರಾಜ್ ಕೆಜಿಎಫ್ಗೆ ಆತಂಕ ಸೃಷ್ಟಿ ಮಾಡಿದರೂ ಎಂಬುದನ್ನು ತಿಳಿಯುವ ಕುತೂಹಲವಿದ್ದರೆ ಮುಂದೆ ಓದಿ.
ಕೆಜಿಎಫ್ ಮತ್ತು ಪ್ರಕಾಶ್ ರಾಜ್ ನಡುವೆ ಇರುವ ಸಂಬಂಧಕ್ಕೂ ಮುನ್ನ ದಿ ಕಾಶ್ಮೀರ್ ಫೈಲ್ಸ್ ಮತ್ತು ಪ್ರಕಾಶ್ ರಾಜ್ ನಡುವಿನ ಹೊಸ ಸಂಬಂಧದ ಬಗ್ಗೆ ಹೇಳುತ್ತೇವೆ. ಇತ್ತೀಚೆಗೆ ಪ್ರಕಾಶ್ ರಾಜ್ ಅವರು ಕಾಶ್ಮೀರ್ ಫೈಲ್ಸ್ ಚಿತ್ರದ ಬಗ್ಗೆ ಟ್ವೀಟ್ ಮಾಡಿದ್ದರು. ಅದೇನೆಂದರೆ, ಕಾಶ್ಮೀರ ಫೈಲ್ಸ್ ಚಿತ್ರವು ಹಳೆಯ ಗಾಯಗಳನ್ನು ವಾಸಿಮಾಡುತ್ತದೆಯೇ? ಅಥವಾ ಇದು ಹೆಚ್ಚು ಪ್ರಚೋದಿಸುತ್ತದೆಯೇ? ಅಥವಾ ದ್ವೇಷದ ಬೀಜಗಳನ್ನು ಬಿತ್ತುವುದೇ? ಜಸ್ಟ್ ಆಸ್ಕಿಂಗ್ ಎಂದು ಟ್ವೀಟ್ ಮಾಡಿದ್ದರು. ಅಲ್ಲದೆ, ಟ್ವೀಟ್ ಜತೆಗೆ ಕಾಶ್ಮೀರ ಫೈಲ್ಸ್ ಚಿತ್ರ ವೀಕ್ಷಣೆ ಬಳಿಕ ಚಿತ್ರಮಂದಿರಲ್ಲಿ ವ್ಯಕ್ತಿಯೊರ್ವ ವೀಕ್ಷಕರನ್ನು ಉದ್ದೇಶಿಸಿ ಮಾತನಾಡುತ್ತಿರುವ ವಿಡಿಯೋವನ್ನು ಪೋಸ್ಟ್ ಮಾಡಿದ್ದರು.