ಕೆಜಿಎಫ್ 2 ರಿಲೀಸ್ ಗೆ ಮುನ್ನ ದೇವರ ಮೊರೆ ಹೋದ ಯಶ್ ಮತ್ತು ಟೀಂ
ಕುಕ್ಕೆ ಸುಬ್ರಹ್ಮಣ್ಯಕ್ಕೆ ರಾಕಿಂಗ್ ಸ್ಟಾರ್ ಯಶ್ ಭೇಟಿ ನೀಡಿದ್ದು, ಕೆ.ಜಿ.ಎಫ್ 2 ಸಿನಿಮಾ ಬಿಡುಗಡೆಗೂ ಮುನ್ನ ಸುಬ್ರಹ್ಮಣ್ಯ ಸ್ವಾಮಿ ದರ್ಶನ ಪಡೆದಿದ್ದಾರೆ. ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಜೊತೆ ಭೇಟಿ ನೀಡಿದ್ದು, ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಕೆಜಿಎಫ್ 2′ ಚಿತ್ರದ ಬಿಡುಗಡೆಗೂ ಮುನ್ನ ರಾಕಿಂಗ್ ಸ್ಟಾರ್ ಯಶ್ ಚಿತ್ರತಂಡದ ಜೊತೆ ದೇವಾಲಯಗಳಿಗೆ ಭೇಟಿ ನೀಡಿದ್ದು, ಪ್ರಸಿದ್ದ ದೇವಾಲಯಗಳಾದ ಕುಕ್ಕೆ ಸುಬ್ರಹ್ಮಣ್ಯ ಮತ್ತು ಧರ್ಮಸ್ಥಳಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿದ್ಧಾರೆ.
ಇಂದು ಬೆಳಿಗ್ಗೆ ಹೆಲಿಕಾಪ್ಟರ್ ಮೂಲಕ ಧರ್ಮಸ್ಥಳಕ್ಕೆ ಬಂದಿದ್ದ ಯಶ್ ನಂತರ ಕಾರ್ನಲ್ಲಿ ಕುಕ್ಕೆ ಸುಬ್ರಹ್ಮಣ್ಯಕ್ಕೆ ಹೋಗಿದ್ದಾರೆ. ಯಶ್ ಜೊತೆಯಲ್ಲಿ ಕೆ.ಜಿ.ಎಫ್ ನಿರ್ಮಾಪಕ ವಿಜಯ್ ಕಿರಂಗದೂರು ಸಹ ದೇವರ ದರ್ಶನ ಪಡೆದಿದ್ದು, ವಿಶೇಷ ಪೂಜೆ ಸಲ್ಲಿಸಿದ್ಧಾರೆ. ಧರ್ಮಸ್ಥಳದಲ್ಲಿ ವಿಶೇಷ ಪೂಜೆಯ ನಂತರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರನ್ನು ಯಶ್ ಭೇಟಿ ಮಾಡಿ ಮಾತುಕತೆ ನಡೆಸಿ, ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದಾರೆ. ಅಲ್ಲದೇ. ಹೆಗ್ಗಡೆಯವರು ಯಶ್ ಗೆ ಶಾಲು ಹೊದಿಸಿ ಗೌರವಿಸಿದ್ದಾರೆ.
ಅಲ್ಲದೇ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಯಶ್ ಮತ್ತು ವಿಜಯ್ ಕಿರಗಂದೂರು ಬಿಳಿ ಪಂಚೆ ಮತ್ತು ಶರ್ಟ್ ಧರಿಸಿದ್ದುಮ ಅಭಿಮಾನಿಗಳ ಮೆಚ್ಚುಗೆಗೆ ಪಾತ್ರವಾಗಿದೆ. ಕೆಜಿಎಫ್ 2 ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಕೆಜಿಎಫ್ 1ರಂತೆ ಇದು ಸಹ ಅದ್ಭುತವಾಗಿರಲಿದೆ ಎಂದು ಈ ಚಿತ್ರದ ಮೇಲೆ ಅಭಿಮಾನಿಗಳ ನಿರೀಕ್ಷೆ ಹೆಚ್ಚಿದೆ. ಇತ್ತೀಚೆಗಷ್ಟೇ ಈ ಚಿತ್ರದ ತೂಫಾನ್, ಗಗನ ನೀ ಹಾಡು ಹಾಗೂ ಟ್ರೈಲರ್ ಬಿಡುಗಡೆಯಾಗಿ ಧೂಳೆಬ್ಬಿಸಿದೆ. ರಾಕಿಂಗ್ ಸ್ಟಾರ್ ಯಶ್ ಆಭಿನಯದ ಕೆಜಿಎಫ್ ಸಿನಿಮಾ ಬಾಲಿವುಡ್ ಹಾಗೂ ಟಾಲಿವುಡ್ ಸೇರಿ ವಿಶ್ವಾದ್ಯಂತ ದೊಡ್ಡ ಮಟ್ಟದ ಹವಾ ಮಾಡಿತ್ತು
ಈ ಕಾರಣಕ್ಕೆ ‘ಕೆಜಿಎಫ್ 2’ ಸಿನಿಮಾ ಮೇಲೆ ದೊಡ್ಡ ಮಟ್ಟದ ನಿರೀಕ್ಷೆ ಇದ್ದು, ‘ಕೆಜಿಎಫ್ 2’ ಚಿತ್ರ ಬಿಡುಗಡೆಗೆ ಸಿನಿ ರಸಿಕರು ಕಾಯುತ್ತಿದ್ದಾರೆ.
ಭಾರಿ ಸಂಖ್ಯೆಯ ಚಿತ್ರಮಂದಿರಗಳಲ್ಲಿ ‘ಕೆಜಿಎಫ್ 2’ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೇಶದಲ್ಲಷ್ಟೆ ಅಲ್ಲದೆ ವಿದೇಶಗಳಲ್ಲಿಯೂ ದೊಡ್ಡ ಸಂಖ್ಯೆಯ ಚಿತ್ರಮಂದಿರಗಳಲ್ಲಿ ಸಿನಿಮಾ ಬಿಡುಗಡೆಗೊಳ್ಳುತ್ತಿದೆ.ಈಗಾಗಲೇ ಗಾಂಧಿನಗರದಲ್ಲಿ ಯಶ್ ಕಟೌಟ್ಗಳು ನಿರ್ಮಾಣ ಕಾರ್ಯ ಭರದಿಂದ ಸಾಗಿದೆ. ಕೆಜಿಎಫ್ ಸಿನಿಮಾ ಬಂದಮೇಲೆ ಹೊರ ದೇಶಗಳಲ್ಲೂ ಕನ್ನಡ ಸಿನಿಮಾಗೆ ಸಿಕ್ಕಾಪಟ್ಟೆ ಡಿಮ್ಯಾಂಡ್ ಹೆಚ್ಚಿದೆ.
ದಕ್ಷಿಣ ಭಾರತದ ಸಿನಿಮಾಗಳು ವಿದೇಶಗಳಲ್ಲಿ ಹೇಗೆ ದುಡ್ಡು ಮಾಡುತ್ತವೆ ಅನ್ನುವುದಕ್ಕೆ ಇತ್ತೀಚೆಗೆ ತೆರೆಕಂಡಿರುವ ‘ಆರ್ಆರ್ಆರ್’ ಸಿನಿಮಾಗಿಂತ ದೊಡ್ಡ ಉದಾಹರಣೆ ಬೇಕಿಲ್ಲ. ಇದೀಗ ನಮ್ಮ ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್ ಸರದಿ. ಕೆಜಿಎಫ್ 2 ನೋಡಲು ಇಡೀ ವಿಶ್ವದ ಜನರು ಕಾಯುತ್ತಿದ್ದಾರೆ. ಹೌದು, ಯುಕೆಯಲ್ಲಿ ಕೇವಲ 12 ಗಂಟೆಗಳಲ್ಲಿ 5000 ಸಾವಿರ ಟಿಕೆಟ್ ಸೋಲ್ಡ್ಔಟ್ ಆಗಿದೆ. ಇದನ್ನು ನೋಡಿದರೆ ತಿಳಿಯುತ್ತೆ ರಾಕಿಭಾಯ್ನ ಹವಾ ಎಷ್ಟಿದೆ ಅಂತ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada