ಕೊಡಚಾದ್ರಿ ಬೆಟ್ಟಕ್ಕೂ ಕರಾವಳಿಗೂ ಬರಲಿದೆ ಕೇಬಲ್ ಕಾರ್ ಯೋಜನೆ..!

ಕೊಡಚಾದ್ರಿ ಬೆಟ್ಟದಿಂದ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ 1,200 ಕೋಟಿ ರೂ. ವೆಚ್ಚದ 7 ಕಿ.ಮೀ. ಉದ್ದದ ಕೇಬಲ್‌ ಕಾರ್‌ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಅನುಷ್ಠಾನ ಗೊಳಿಸಲು ಕೇಂದ್ರ ಸರಕಾರ ಶುಕ್ರವಾರ ಅನುಮೋದನೆ ನೀಡಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಹೇಳಿದ್ದಾರೆ. ಕೊಡಚಾದ್ರಿ ಬೆಟ್ಟಕ್ಕೆ ರಸ್ತೆ ನಿರ್ಮಾಣ ಮಾಡಲು ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು 20 ಕೋಟಿ ರೂ. ಅನುದಾನ ನೀಡಿದ್ದರು. ಆದರೆ ಕಾನೂನು ತೊಡಕಿನಿಂದ ಅರ್ಧಕ್ಕೆ ನಿಲ್ಲಿಸಲಾಗಿತ್ತು.  ಶುಕ್ರವಾರ ದಿಲ್ಲಿಯಲ್ಲಿ ಕೇಂದ್ರ ಪರಿಸರ ಸಚಿವ ಭೂಪೇಂದ್ರ ಯಾದವ್‌ ಅವರನ್ನು ಭೇಟಿ ಮಾಡಿ ರಸ್ತೆ ನಿರ್ಮಾಣಕ್ಕೆ ಪರಿಸರ ಇಲಾಖೆಯ ಅನುಮತಿ ನೀಡುವಂತೆ ಮನವಿ ಸಲ್ಲಿಸಲಾಗಿತ್ತು. ಇದನ್ನು ಪುರಸ್ಕರಿಸಿದ ಸಚಿವರು ಸಭೆಯಲ್ಲಿ ಅನುಮೋದನೆ ನೀಡಿದ್ದಾರೆ ಎಂದು ಬಿ.ವೈ. ರಾಘವೇಂದ್ರ ಶಿಕಾರಿಪುರದಲ್ಲಿ ತಿಳಿಸಿದರು.15 ನಿಮಿಷಗಳಲ್ಲಿ ತಲುಪಲು ಸಾಧ್ಯ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:

https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಮೊಳಕೆ ಕಾಳಿನಿಂದ ದೇಹಕ್ಕೆ ಸಿಗುತ್ತೆ ಅಪರಿಮಿತ ಶಕ್ತಿ

Mon Mar 28 , 2022
ಮೊಳಕೆ ಕಾಳುಗಳಿಂದ ನಮ್ಮ ದೇಹಕ್ಕೆ ಸಿಗುವ ಶಕ್ತಿ ಅಪರಿಮಿತ. ಅದರ ಉಪಯೋಗಗಳ ಬಗ್ಗೆ ತಿಳಿದುಕೊಳ್ಳೊಣ. ನಮ್ಮ ದೇಹಕ್ಕೆ ಹಸಿ ತರಕಾರಿಗಳ ಜೊತೆ ಮೊಳಕೆ ಕಾಳುಗಳು ಬಹಳ ಒಳ್ಳೆಯದು. ಇದರಲ್ಲಿ ಫೈಬರ್, ಕಬ್ಬಿಣದ ಅಂಶ ಸಾಕಷ್ಟಿದೆ. ವಿಟಮಿನ್ ಸಿ ಮತ್ತು ಎ ಅಂಶಗಳು ಇರುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಅಸಿಡಿಟಿ ಸಮಸ್ಯೆಯಿಂದ ಬಳಲುತ್ತಿರುವವರು ಈ ಮೊಳಕೆ ಕಾಳುಗಳನ್ನು ತಿನ್ನುವುದರಿಂದ ಅವರ ಸಮಸ್ಯೆ ಪರಿಹಾರವಾಗುತ್ತದೆ. ಕಬ್ಬಿಣದ ಅಂಶ ಸಾಕಷ್ಟು ಇರುವುದರಿಂದ ಇದು […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: