“ಲಂಕಾಸುರ”ನಾಗಿ ವಿನೋದ್ ಪ್ರಭಾಕರ್ ಕಾಣಿಸುತ್ತಿದ್ದಾರೆ.

 

“ಲಂಕಾಸುರ”ನಾಗಿ ವಿನೋದ್ ಪ್ರಭಾಕರ್ ಕಾಣಿಸುತ್ತಿದ್ದಾರೆ.

ನಟ ವಿನೋದ್ ಪ್ರಭಾಕರ್ ಟೈಗರ್ ಟಾಕೀಸ್ ಎಂಬ ನಿರ್ಮಾಣ ಸಂಸ್ಥೆ ಪ್ರಾರಂಭ ಮಾಡಿದ್ದು, ” ಲಂಕಾಸುರ” ಎಂಬ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ. ನಿಶಾ ವಿನೋದ್ ಪ್ರಭಾಕರ್ ಈ ಚಿತ್ರದ ನಿರ್ಮಾಪಕರು.

ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸುತ್ತಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಆಕಾಶ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ. ಒಂದು ಸಾಹಸ ಸನ್ನಿವೇಶ ಮಾತ್ರ ಬಾಕಿಯಿದೆ. ಈ ಸಾಹಸ ದೃಶ್ಯಕ್ಕಾಗಿ ವಿನೋದ್ ಹತ್ತು ಕೆಜಿ ತೂಕ ಇಳಿಸಿಕೊಳ್ಳುತ್ತಿದಾರಂತೆ.

ಈ ಹಿಂದೆ “ಮೂರ್ಕಲ್ ಎಸ್ಟೇಟ್” ಎಂಬ ಚಿತ್ರ ನಿರ್ದೇಶಿಸಿದ್ದ ಪ್ರಮೋದ್ ಕುಮಾರ್ ಈ ಚಿತ್ರದ ನಿರ್ದೇಶಕರು.

ಚಿತ್ರದಲ್ಲಿ ಐದು ಸಾಹಸ ಸನ್ನಿವೇಶಗಳಿದೆ.  ಡಿಫರೆಂಟ್ ಡ್ಯಾನಿ, ವಿನೋದ್, ಚೇತನ್ ಡಿಸೋಜ, ಅರ್ಜುನ್ ರಾಜ್ ಈ  ಚಿತ್ರದ ಸಾಹಸ ನಿರ್ದೇಶಕರು.

ವಿಜೇತ್ ಕೃಷ್ಣ ಸಂಗೀತ ನಿರ್ದೇಶನ, ಸುಜ್ಞಾನ್ ಛಾಯಾಗ್ರಹಣ, ಮುರಳಿ, ಮೋಹನ್ ಅವರ ನೃತ್ಯ ನಿರ್ದೇಶನ ಹಾಗೂ ದೀಪು ಎಸ್ ಕುಮಾರ್ ಸಂಕಲನ ಈ ಚಿತ್ರಕ್ಕಿದೆ.

ವಿನೋದ್ ಪ್ರಭಾಕರ್ ಅವರಿಗೆ ನಾಯಕಿಯಾಗಿ ಪಾರ್ವತಿ ಅರುಣ್ ನಟಿಸಿದ್ದಾರೆ. ಮೊದಲ ಬಾರಿಗೆ ಲೂಸ್ ಮಾದ ಯೋಗಿ ವಿನೋದ್ ಪ್ರಭಾಕರ್ ಅವರೊಂದಿಗೆ ನಟಿಸಿದ್ದಾರೆ. ಹಿರಿಯ ನಟರಾದ ದೇವರಾಜ್ ಹಾಗೂ ರವಿಶಂಕರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ದಾರಿ  ಯಾವುದಯ್ಯ ವೈಕುಂಠಕ್ಕೆ" ಸಿಕ್ಕಿತ್ತು” ನೋಡಿ

Thu Apr 7 , 2022
  ದೇಶ, ವಿದೇಶದ ನಾನಾಭಾಗಗಳ ರಾಷ್ಟ್ರೀಯ ಹಾಗೂ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ನೂರೈವತ್ತಕ್ಕೂ ಅಧಿಕ ಪ್ರಶಸ್ತಿ ಪಡೆದುಕೊಂಡಿರುವ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.‌ ಮಾಜಿ ಸಭಾಪತಿ‌ ವೀರಣ್ಣ ಮತ್ತಿಕಟ್ಟಿ ಸೇರಿದಂತೆ ಹಲವು ವಿವಿಧ ಕ್ಷೇತ್ರದ ಗಣ್ಯರು ಈ ಸಮಾರಂಭದಲ್ಲಿ ಉಪಸ್ಥಿತರಿದ್ದರು. ನನ್ನ ಮೊದಲ ಚಿತ್ರ “ಕೃಷ್ಣ ಗಾರ್ಮೆಂಟ್ಸ್” ನಿರೀಕ್ಷಿತ ಗೆಲವು ದೊರಕಲಿಲ್ಲ. ಎರಡನೇ ಚಿತ್ರ “ದಾರಿ ಯಾವುದಯ್ಯ ವೈಕುಂಠಕೆ” ಚಿತ್ರ ಬಿಡುಗಡೆಗೆ ಮುಂಚೆಯೇ ಜನಪ್ರಿಯವಾಗಿದೆ.‌ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: