ಮಿಲನಾ ‘F0R REGN’ ವಿತ್ ಪೃಥ್ವಿ

 

ಚಿತ್ರದ ಮೊದಲ ಲುಕ್ ಗೆ ಅಭಿಮಾನಿಗಳು ಫಿದಾ..

2020ರ ಸೂಪರ್ ಹಿಟ್ ಚಿತ್ರಗಳಾದ “ದಿಯಾ” ಹಾಗೂ “ಲವ್ ಮಾಕ್ಟೇಲ್” ಚಿತ್ರಗಳ ಮೂಲಕ ಮನೆಮಾತಾಗಿರುವ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯದಲ್ಲಿ ಮೂಡಿಬರುರುತ್ತಿರುವ ಮತ್ತೊಂದು ಸದಭಿರುಚಿಯ ಚಿತ್ರ “F0R REGN”. (ಫಾರ್ ರಿಜಿಸ್ಟರೇಷನ್).

ವರ್ಷದ ಮೊದಲ ಹಬ್ಬ ಯುಗಾದಿಗೆ  ಈ ಚಿತ್ರದ ಫಸ್ಟ್ ಲುಕ್ ಬಿಡುಗಡೆ ಯಾಗಿದೆ. ಚಿತ್ರದ ಫಸ್ಟ್ ಲುಕ್ ಗೆ

ಮೀರಿ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಸಾಮಾಜಿಕ  ಜಾಲತಾಣಗಳಲ್ಲಿ ಈಗಾಗಲೇ  ಒಂದು ಮಿಲಿಯನ್ ಗೂ ಅಧಿಕ ಲೈಕ್ಸ್ ದೊರಕಿದೆ. ಬಹುತೇಕ ಭಾಗದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಚಿತ್ರದಲ್ಲಿ ಪೃಥ್ವಿ ಆಶು ಪಾತ್ರದಲ್ಲಿ ಹಾಗೂ ಮಿಲನಾ ಅವರು ಅನ್ವಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡುತ್ತಿದ್ದಾರೆ.

ದ್ವಾರಕನಾಥ್ ನಿರ್ದೇಶಿಸುತ್ತಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಆರ್.ಕೆ.ಹರೀಶ್ ಸಂಗೀತ ನಿರ್ದೇಶನ, ಅಭಿಷೇಕ್ ಕಳತ್ತಿ ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿರುವ ಈ ಚಿತ್ರದ ಕಾರ್ಯಕಾರ ನಿರ್ಮಾಪಕರಾಗಿ ನಿರಂಜನ್ ರಾಧಾಕೃಷ್ಣ ಇದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

 

Leave a Reply

Your email address will not be published. Required fields are marked *

Next Post

ಶ್ರೀನಗರ ಕಿಟ್ಟಿ‌:’ತೂತು ಮಡಿಕೆ'‌‌ ಮೋಷನ್ ಟೀಸರ್

Tue Apr 5 , 2022
  ಶ್ರೀನಗರ ಕಿಟ್ಟಿ‌:’ತೂತು ಮಡಿಕೆ’‌‌ ಮೋಷನ್ ಟೀಸರ್ ಚಂದನವನದ ಅಂಗಳದಲ್ಲಿ ವಿಭಿನ್ನ ಶೀರ್ಷಿಕೆ ಮೂಲಕ ಗಮನ ಸೆಳೆಯುತ್ತಿರುವ ಸಿನಿಮಾಗಳಲ್ಲಿ ಒಂದು ತೂತು ಮಡಿಕೆ. ಈಗಾಗಲೇ ಶೂಟಿಂಗ್ ಮುಗಿಸಿರುವ ತೂತು ಮಡಿಕೆ ಬಳಗ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿದ್ದು, ಈಗ  ಮೋಷನ್‌ ಟೀಸರ್ ರಿಲೀಸ್ ಮಾಡಿ  ಗಮನಸೆಳೆಯುತ್ತಿದೆ. ಮೋಷನ್ ಟೀಸರ್ ಔಟ್ ಫಸ್ಟ್ ಲುಕ್ ಮೂಲಕ ಗಮನಸೆಳೆದಿರುವ ತೂತು ಮಡಿಕೆ ಸಿನಿಮಾದ ಮೋಷನ್ ಟೀಸರ್ ನ್ನು ನಟ ಶ್ರೀನಗರ ಕಿಟ್ಟಿ‌ ಅನಾವರಣ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: