“ಬಡ್ಡೀಸ್” ಚಿತ್ರದ ವಿಭಿನ್ನ ಪೋಸ್ಟರ್ ಬಿಡುಗಡೆ.

ತೆರೆ ಹಿಂದಿನ ತಾರೆಯರು ಎಂಬ ಬರಹದ ಮೂಲಕ ತಂತ್ರಜ್ಞರಿಗೆ ಮನ್ನಣೆ.

ಸಾಮಾನ್ಯವಾಗಿ ಎಲ್ಲಾ ಚಿತ್ರಗಳ ಪೋಸ್ಟರ್ ಬಿಡುಗಡೆ ಚಿತ್ರರಂಗ ಸೇರಿದಂತೆ ಅನೇಕ ರಂಗಗಳ ಗಣ್ಯರಿಂದ ಮಾಡಿಸುವುದು ವಾಡಿಕೆ.

ಆದರೆ “ಬಡ್ಡೀಸ್” ಚಿತ್ರದ ಪೋಸ್ಟರನ್ನು ಚಿತ್ರಕ್ಕಾಗಿ ದುಡಿದ ತಂತ್ರಜ್ಞರ ಮೂಲಕ ಬಿಡುಗಡೆ ಮಾಡಿಸಿದ್ದಾರೆ ಈ ಚಿತ್ರದ ನಿರ್ಮಾಪಕಿ ಭಾರತಿ ಶೆಟ್ಟಿ ಹಾಗೂ ನಿರ್ದೇಶಕ ಗುರುತೇಜ್ ಶೆಟ್ಟಿ.

ಈ ಪೋಸ್ಟರ್ ಬಿಡುಗಡೆಗಾಗಿ ಎಲ್ಲಾ ತಂತ್ರಜ್ಞರನ್ನು ತಾರೆಯರಂತೆ ಸಿದ್ದಪಡಿಸಿ, ಫೋಟೋ ಶೂಟ್ ಕೂಡ ಮಾಡಿಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಈ ಭಾವಚಿತ್ರಗಳಿಗೆ ಭಾರಿ ಮೆಚ್ಚುಗೆ ವ್ಯಕ್ತವಾಗಿದೆ.

ನಿರ್ಮಾಪಕಿ ಭಾರತಿ ಶೆಟ್ಟಿ, ನಿರ್ದೇಶಕ ಗುರುತೇಜ್ ಶೆಟ್ಟಿ, ಛಾಯಾಗ್ರಹಣ ಮಾಡಿರುವ ನಿಭಾ ಶೆಟ್ಟಿ, ಸಂಗೀತ ನಿರ್ದೇಶಕ ಜ್ಯೂಡಾ ಸ್ಯಾಂಡಿ, ಸಾಹಸ ಸಂಯೋಜಕ ಡಿಫರೆಂಟ್ ಡ್ಯಾನಿ, ನೃತ್ಯ ನಿರ್ದೇಶಕ ಧನಂಜಯ, ಸಂಕಲನಕಾರ ಕೆ.ಎಂ.ಪ್ರಕಾಶ್, ಪಿ.ಆರ್.ಓ ಸುಧೀಂದ್ರ ವೆಂಕಟೇಶ್ ಹಾಗೂ ಡಿಸೈನರ್ ಮಣಿ ಹೊಸ ಲುಕ್ ನಲ್ಲಿ ಕಾಣಿಸಿಕೊಂಡು‌ ಪೋಸ್ಟರ್ ಬಿಡುಗಡೆ ಮಾಡಿದ್ದಾರೆ.

ಚಿತ್ರಕ್ಕೆ ಹಿನ್ನೆಲೆ ಸಂಗೀತ ಅಳವಡಿಸಲಾಗುತ್ತಿದ್ದು, ಮೇನಲ್ಲಿ ತೆರೆಗೆ ಬರುವ ಸಾಧ್ಯತೆಯಿದೆ.

ಭಾರತಿ ಶೆಟ್ಟಿ ಫಿಲಂಸ್ ಸಂಸ್ಥೆಯ ಮೊದಲ ಚಿತ್ರವಾಗಿ ಕಿರಣ್ ರಾಜ್ ನಟನೆಯ “ಬಡ್ಡೀಸ್” ಚಿತ್ರ ನಿರ್ಮಾಣವಾಗುತ್ತಿದೆ.

ಗುರುತೇಜ್ ಶೆಟ್ಟಿ ಕಥೆ, ಚಿತ್ರಕಥೆ, ಸಂಭಾಷಣೆ ಹಾಗೂ ಹಾಡುಗಳನ್ನು ಬರೆದು ನಿರ್ದೇಶನ ಮಾಡಿದ್ದಾರೆ.

ಮೂರು ಹಾಡುಗಳಿರುವ ಈ ಚಿತ್ರಕ್ಕೆ ಜ್ಯೂಡಾ ಸ್ಯಾಂಡಿ ಸಂಗೀತ ನೀಡುತ್ತಿದ್ದಾರೆ.

ಯು.ಎಸ್.ಎ ನಿವಾಸಿ‌ ನಿಭಾ ಶೆಟ್ಟಿ‌ ಈ ಚಿತ್ರದ ಛಾಯಾಗ್ರಹಕರು. ಕೆ.ಎಂ.ಪ್ರಕಾಶ್ ಸಂಕಲನ, ಧನಂಜಯ್ ನೃತ್ಯ ನಿರ್ದೇಶನ ಹಾಗೂ ಡಿಫರೆಂಟ್ ಡ್ಯಾನಿ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.

ಕಿರಣ್ ರಾಜ್ ಗೆ ನಾಯಕಿಯಾಗಿ ಸಿರಿ ಪ್ರಹ್ಲಾದ್ ಅಭಿನಯಿಸಿದ್ದಾರೆ. ಗೋಪಾಲ್ ದೇಶಪಾಂಡೆ, ಅರವಿಂದ್ ಬೋಳಾರ್, ವಿನಯ್ ರೋಹನ್ ಸಾಯಿ, ಗಿರೀಶ್ ಹೆಗಡೆ, ಗಿರೀಶ್ ಜತ್ತಿ, ಲಂಕೇಶ್, ಹೇಮಂತ್, ವಿವೇಕ್ ಮುಂತಾದವರು “ಬಡ್ಡೀಸ್” ನಲ್ಲಿ ನಟಿಸಿದ್ದಾರೆ.

Leave a Reply

Your email address will not be published. Required fields are marked *

Next Post

ಉಪ್ಪಿ ಕಂಠಸಿರಿಯಲ್ಲಿ "ಹುಷಾರ್" ಹಾಡು.

Mon Mar 21 , 2022
ರಿಯಲ್ ಸ್ಟಾರ್ ಉಪೇಂದ್ರ ತಮ್ಮ ಅಭಿನಯದಷ್ಟೇ, ಗಾಯನದಿಂದಲೂ ಜನಪ್ರಿಯರಾದವರು. ಪ್ರಸ್ತುತ ಉಪೇಂದ್ರ ಅವರು “ಹುಷಾರ್” ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸತೀಶ್ ರಾಜ್ ಬರೆದಿರುವ “ನೀ ನೋಡೊಕೆ ಸಿಕ್ಸಟಿನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿ” ಎಂಬ ಹಾಡನ್ನು ಇತ್ತೀಚಿಗೆ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಉಪೇಂದ್ರ ಹಾಡಿದ್ದಾರೆ. ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಅಶ್ವಿನ್ ಅರುಣ್ ಕೃಷ್ಣ ಈ ಚಿತ್ರದ ಸಹ ನಿರ್ಮಾಪಕರು. […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: