ಮಾರ್ಚ್ 31ಕ್ಕೆ ‘ಸ್ಟಾಕರ್’ ಸಿನಿಮಾ ರಿಲೀಸ್

 

ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಕ್ಯಾಪ್ ನಲ್ಲಿ ಐದಾರು ವರ್ಷಗಳ ಕಾಲ ಕೆಲಸ ಕಲಿತಿರುವ.. ಸೈಕೋ ಎಂಬ ತೆಲುಗು ಸಿನಿಮಾ‌ ನಿರ್ದೇಶನ ಮಾಡಿರುವ ಅನುಭವ ಹೊಂದಿರುವ ಕಿಶೋರ್ ಭಾರ್ಗವ್ ಆಕ್ಷನ್ ಕಟ್ ಹೇಳಿರುವ ಸ್ಟಾಕರ್ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ಮಾರ್ಚ್ 31ಕ್ಕೆ 30 ಸ್ಕ್ರೀನ್ ಗಳಲ್ಲಿ ರಾಜ್ಯಾದ್ಯಂತ ಸ್ಟಾಕರ್ ಸಿನಿಮಾ ಬಿಡುಗಡೆಯಾಗಲಿದೆ.

ಸಖತ್ ಸಸ್ಪೆನ್ಸ್ ‘ಸ್ಟಾಕರ್’ ಟ್ರೇಲರ್ ರಿಲೀಸ್

ಸ್ಟಾಕರ್ ಸಿನಿಮಾ ಫಸ್ಟ್ ಲುಕ್ ಮೂಲಕ ಸಖತ್ ಕ್ಯೂರಿಯಾಸಿಟಿ ಹುಟ್ಟಿಸಿತ್ತು. ಈಗ ರಿಲೀಸ್ ಆಗಿರುವ ಟ್ರೇಲರ್ ಸಿನಿಮಾ ಮೇಲಿನ ಈ ನಿರೀಕ್ಷೆಯನ್ನು ದುಪ್ಪಟ್ಟು ಮಾಡಿದೆ. ಗಂಡ, ಹೆಂಡತಿ, ಮಗಳನ್ನೊಳಗೊಂಡ ಸುಂದರ ಕುಟುಂಬ..ಎಲ್ಲವೂ ಚೆನ್ನಾಗಿದ್ದ ಆ ಮಗಳ ಲೈಫ್ ನಲ್ಲಿ ಕಾಟ ಕುಡುವ ವಿಲನ್.. ಆ ವಿಲನ್ ಮತ್ತೆ ಹಚ್ಚಲು ಬರುವ ಉಗ್ರ ನಿಗ್ರಹ ಪಡೆ.

ಇದು ಸ್ಟಾಕರ್ ಟ್ರೇಲರ್ ಹೈಲೆಟ್.. ಸಸ್ಪೆನ್ಸ್, ಥ್ರಿಲ್ಲಿಂಗ್ ಕೊಡುವ ಟ್ರೇಲರ್ ರಿಲೀಸ್ ಮಾಡಿರುವ ಚಿತ್ರತಂಡ ಪ್ರಮೋಷನ್ ಕಹಳೆ ಮೊಳಗಿಸಿದೆ.

ಸ್ಟಾಕರ್ ಸಿನಿಮಾದಲ್ಲಿ ಬೆಳದಿಂಗಳ ಬಾಲೆ ಸುಮನ್ ನರ್ಗಕರ್, ರಾಮ್, ಐಶ್ವರ್ಯ ನಂಬಿಯರ್, ಉದಯ್ ಆಚಾರ್, ನಮ್ರತಾ ಪಾಟೀಲ್, ಜಿತೆನ್ ಆರೋರಾ, ಭವಾನಿಶಂಕರ್ ದೇಸಾಯಿ ಮುಂತಾದವರು ಸ್ಟಾಕರ್  ಸಿನಿಮಾದಲ್ಲಿ ನಟಿಸಿದ್ದಾರೆ.

ಥ್ರಿಲ್ಲರ್ ಜೊತೆಗೆ ಸಸ್ಪೆನ್ಸ್ ಕಥಾಹಂದರ ಹೊಂದಿರುವ ಸ್ಟಾಕರ್ ಸಿನಿಮಾವನ್ನು, ಎಸ್ ಎಂ ಎಲ್ ಪ್ರೊಡಕ್ಷನ್ಸ್, ಸ್ಕ್ರಿಪ್ಟ್ ಟೀಸ್ ಫಿಲ್ಮ್ಸ್  ನಡಿ ಎಂ ಎನ್ ವಿ ರಮಣ,  ಸಂದೀಪ್ ಗೌಡ ಹಾಗೂ ಸ್ವಾತಿ ಗೋವಾಡ ನಿರ್ಮಾಣ ಮಾಡಿದ್ದಾರೆ.

ಸೋಮಶೇಖರ್, ಭರತ್ ಪ್ರಮೋದ್ ಹಾಗೂ ಕಿಶೋರ್ ಭಾರ್ಗವ್ ಚಿತ್ರಕಥೆ ಬರೆದಿದ್ದು, ವಿನೋದ್ ರಾಜ್ ಕ್ಯಾಮೆರಾ ಕೈ ಚಳಕ, ಸ್ಕಂದ ಕಶ್ಯಪ್ ಮ್ಯೂಸಿಕ್, ಸುಧೀರ್ ಪಿಆರ್ ಕಲಾ ನಿರ್ದೇಶನ, ವಂದನಾ ಭಂಡಾರೆ ವಸ್ತ್ರ ವಿನ್ಯಾಸ ಸಿನಿಮಾದಲ್ಲಿರಲಿದೆ. ಟ್ರೇಲರ್ ರಿಲೀಸ್ ಮಾಡಿ ಕುತೂಹಲ ಹೆಚ್ಚಿಸಿರುವ ಸ್ಟಾಕರ್ ಸಿನಿಮಾ ಮಾರ್ಚ್ 31ಕ್ಕೆ ತೆರೆಗಪ್ಪಳಿಸಲಿದೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ದೇಶದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಮತ್ತೆ ಏರಿಕೆ : ಇಂದು ಪ್ರಮುಖ ನಗರಗಳ ಇಂಧನ ದರ ಎಷ್ಟಿದೆ ಗೊತ್ತಾ?

Tue Mar 29 , 2022
ದೇಶದಲ್ಲಿ ದಿನದಿಂದ ದಿನಕ್ಕೆ ಪೆಟ್ರೋಲ್ , ಡೀಸೆಲ್ ಬೆಲೆಯಲ್ಲಿ ಏರಿಕೆಯಾಗುತ್ತಿದ್ದು, ಇಂದು ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ 80 ಪೈಸೆ ಏರಿಕೆಯಾಗಿದೆ. ದೆಹಲಿಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಇಂದು ಕ್ರಮವಾಗಿ ಪ್ರತಿ ಲೀಟರ್ಗೆ 80 ಮತ್ತು 70 ಪೈಸೆ ಹೆಚ್ಚಾಗಿದೆ. ಈ ಮೂಲಕ ಪೆಟ್ರೋಲ್ ಬೆಲೆ ಲೀಟರ್ ಗೆ 100.21 ರೂ ಮತ್ತು ಡೀಸೆಲ್ ಬೆಲೆ ಲೀಟರ್ ಗೆ 91.47 ರೂ . ಇದೆ. ಮುಂಬೈನಲ್ಲಿ, ಪೆಟ್ರೋಲ್ 85 […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: