ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರು ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ.
ದೇವಸ್ಥಾನ ಮತ್ತು ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ನಿರ್ಬಂಧದ ನಡುವೆ ನಾಳೆಯಿಂದ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ಚೆನ್ನಕೇಶವ ಜಾತ್ರೆ ನಡೆಯಲಿದೆ. ಈ ಸಂಬಂಧ ಮಾತನಾಡಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ನಮ್ಮ ಹಾಸನ ಜಿಲ್ಲೆಯಲ್ಲಿ ಯಾವ ಜಾತ್ರೆಯಲ್ಲೂ ಮುಸ್ಲಿಂಮರು ನಿರ್ಬಂಧ ಹೇರುವುದಕ್ಕೆ ಅವಕಾಶ ಕೊಡುವುದಿಲ್ಲ. ಚೆನ್ನಕೇಶವ ಜಾತ್ರೆಯಲ್ಲಿ ಸಮಸ್ಯೆ ಆಗಿರುವುದು ಗಮನಕ್ಕೆ ಬಂದಿದೆ. ಖುದ್ದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರಿಗೆ ಸಮಸ್ಯೆ ಬಗೆಹರಿಸುವಂತೆ ಹೇಳಿದ್ದೇನೆ. ನಿರ್ಬಂಧ ತೆರವು ಮಾಡಿಸಿ ಅವರಿಗೆ ವ್ಯಾಪಾರಕ್ಕೆ ಅವಕಾಶ ಕೊಡಿಸುತ್ತೇನೆ. ಹಾಸನ ಜಿಲ್ಲೆ ಮಾತ್ರ ಅಲ್ಲ ಎಲ್ಲಾ ಜಿಲ್ಲೆಗಳಲ್ಲೂ ನಿರ್ಬಂಧ ತೆರವಿಗೆ ನನ್ನ ಹೋರಾಟ ಇರುತ್ತದೆ ಎಂದು ಹೇಳಿದ್ದಾರೆ.
ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಕುಮಾರಸ್ವಾಮಿ ಅವರು, ಜೆಡಿಎಸ್ ಗೆ ಬಹುಮತ ಕೊಡಿ. 5 ವರ್ಷದಲ್ಲಿ ರಾಜ್ಯದ ನೀರಾವರಿ ಯೋಜನೆ ಅನುಷ್ಠಾನ ಮಾಡುತ್ತೇನೆ. ಸಾಧ್ಯವಾಗದಿದ್ದರೆ ಜೆಡಿಎಸ್ ವಿಸರ್ಜನೆ ಮಾಡುತ್ತೇವೆ ಎಂದು ಹೇಳಿದರು.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada