ಉಕ್ರೇನ್ ಮತ್ತು ರಷ್ಯಾ ಯುದ್ಧದಲ್ಲಿ ಮೃತಪಟ್ಟ ಹಾವೇರಿ ಮೂಲದ ಎಂಬಿಬಿಎಸ್ ವಿದ್ಯಾರ್ಥಿ ನವೀನ್ ಮೃತದೇಹವನ್ನ ವಾಪಸ್ ತರುವ ಪ್ರಯತ್ನದಲ್ಲಿ ಸರ್ಕಾರ. ನವೀನರ ಮೃತ ದೇಹ ಸೋಮವಾರ ಬೆಳಗ್ಗೆ 3 ಗಂಟೆಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬರಲಿದ್ದು, ಆನಂತರ ನವೀನ್ ತವರಾದ ಹಾವೇರಿ ಜಿಲ್ಲೆಯ ಚಳಗೇರಿಗೆ ತೆಗೆದುಕೊಂಡು ಹೋಗಲಾಗುತ್ತದೆ. ನವೀನ್ ಮೃತದೇಹವನ್ನ ದಾವಣಗೆರೆಯ ಎಸ್.ಎಸ್. ಮೆಡಿಕಲ್ ಕಾಲೇಜಿಗೆ ವೈದ್ಯಕೀಯ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನೀಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಕಾರಣ ಡಾಕ್ಟರ್ ಆಗಬೇಕೆಂಬ ನವೀನ್ ಕನಸು ಈಡೇರಲಿಲ್ಲ. ಕೊನೇ ಪಕ್ಷ ಆತನ ದೇಹ ಮೆಡಿಕಲ್ ಓದುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ನವೀನ್ ತಂದೆ ಶೇಖರಪ್ಪ ಗ್ಯಾನಗೌಡರ ಹೇಳಿದ್ದಾರೆ.