ನವಜಾತ ಶಿಶುವೊಂದು ಸಾವನ್ನಪ್ಪಿರುವ ದಾರುಣ ಘಟನೆ
ಅಂಬುಲೆನ್ಸ್ ನಲ್ಲಿ ಅಕ್ಸಿಜನ್ ಇಲ್ಲದ ಹಿನ್ನಲೆ ನವಜಾತ ಗಂಡು ಶಿಶುವೊಂದು ಉಸಿರಾಟ ಸಮಸ್ಯೆಗೆ ಒಳಗಾಗಿ ಸಾವನ್ನಪ್ಪಿರುವ ದಾರುಣ ಘಟನೆ .
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಬಸವಪಟ್ಟಣ ಗ್ರಾಮದಲ್ಲಿ ನಡೆದಿದೆ. ಶೃಂಗಾರಬಾಬು ತಾಂಡ ದ ಹಾಲೇಶ್ ನಾಯ್ಕ್, ಸ್ವಾತಿ ದಂಪತಿಗಳ ಮೊದಲನೇ ಮಗು ಹುಟ್ಟಿದ ಕೆಲವೇ ಗಂಟೆಗಳಲ್ಲಿ ಆಮ್ಲಜನಕ ಕೊರತೆಯಿಂದಾಗಿ ಅಸುನೀಗಿದೆಇಂದು ಬೆಳಗ್ಗೆ 7 ಗಂಟೆಗೆ ಸ್ವಾತಿಗೆ ಹೆರಿಗೆಯಾಗಿದ್ದು,
ಗಂಡು ಮಗು ಜನಿಸಿತು. ಈ ವೇಳೆ ಮಗುವಿಗೆ ಉಸಿರಾಟದ ತೊಂದರೆ ಇದೆ. ಹೆಚ್ಚಿನ ಚಿಕಿತ್ಸೆ ಗೆ ಹೊನ್ನಾಳಿ ಗೆ ಕರೆದೊಯ್ಯಲು ವೈದ್ಯರು ಸೂಚಿಸಿದ್ದರು. ಘಟನೆಗೆ ಆಸ್ಪತ್ರೆ ಸಿಬ್ಬಂದಿಗಳ ನಿರ್ಲಕ್ಷ್ಯವೇ ಕಾರಣ ಎಂದು ಸಂಬಂಧಿಕರು ಆಸ್ಪತ್ರೆಯ ಮುಂಭಾಗ ಪ್ರತಿಭಟನೆ ಮಾಡಿದರು. ಸ್ಥಳಕ್ಕೆ ಬಸವಪಟ್ಟಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada