ಬೇಸಿಗೆಯಲ್ಲಿ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಜಾರಿ ಮಾಡುವುದಿಲ್ಲ ಎಂದು ಇಂಧನ ಸಚಿವ ವಿ.ಸುನಿಲ್ ಕುಮಾರ್ ಹೇಳಿದ್ದಾರೆ .ಸದಸ್ಯ ಹರೀಶ್ ಕುಮಾರ್ ವಿಷಯ ಪ್ರಸ್ತಾಪಿಸಿ. ಕಲ್ಲಿದ್ದಲ್ಲು ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ಕುಂಠಿತವಾಗುತ್ತಿದೆ.ಅದನ್ನು ಮರೆಮಾಚಲು ಅಧಿಕಾರಿಗಳು ತಾಂತ್ರಿಕ ಅಡೆಚರಣೆಯ ನೆಪದಲ್ಲಿ ವಿದ್ಯುತ್ ಕಡಿತ ಮಾಡುತ್ತಿದ್ದಾರೆ .ರಾಜ್ಯ ಸರ್ಕಾರ ಈಗಲೇ ಎಚ್ಚೆತ್ತುಕೊಳ್ಳಬೇಕು ಎಂದು ಆಗ್ರಹಿಸಿದರು.ಇದಕ್ಕೆ ಉತ್ತರಿಸಿದ ಸಚಿವರು ಆರಂಭದಲ್ಲಿ ಕಲ್ಲಿದ್ದಲು ಕೊರತೆ ಉಂಟಾಗಿತ್ತು ಕೊನೆ ಕೂಡಲೇ ನಾನೇ ಖುದ್ದಾಗಿ ದೆಹಲಿಗೆ ಹೋಗಿ ಕೇಂದ್ರ ಸಚಿವರು ಮತ್ತು ಅಧಿಕಾರಿಗಳ ಜೊತೆ ಚರ್ಚೆ ಮಾಡಿದ್ದೇನೆ.ನಮ್ಮ ಮುಖ್ಯಮಂತ್ರಿಗಳು ಕೂಡ ನೆರವಿಗೆ ಬಂದರು ಇದರಿಂದ ಕೊರತೆ ನಿವಾರಣೆಯಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada