ಪಡಿತರ ವ್ಯವಸ್ಥೆಯ ಮೂಲಕ ಸಾರವರ್ಧಿತ ಅಕ್ಕಿ ವಿತರಿಸಲು ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಮೂರು ಹಂತದಲ್ಲಿ ಯೋಜನೆ ಜಾರಿಗೊಳಿಸಲಾಗುತ್ತದೆ. ಕೇಂದ್ರ ಮಾಹಿತಿ, ಪ್ರಸಾರ ಖಾತೆ ಸಚಿವ ಅನುರಾಗ್ ಠಾಕೂರ್ ಈ ಬಗ್ಗೆ ಮಾಹಿತಿ ನೀಡಿದ್ದು, ಪಡಿತರ ವ್ಯವಸ್ಥೆ ಮೂಲಕ ಸಾರವರ್ಧಿತ ಅಕ್ಕಿ ವಿತರಿಸಲಾಗುವುದು. ಮೊದಲ ಹಂತದಲ್ಲಿ ಪ್ರಧಾನಮಂತ್ರಿ ಪೋಷಣ ಯೋಜನೆ ಮತ್ತು ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯಡಿ ವಿತರಿಸಲಾಗುವುದು ಎಂದರು.
ಎರಡನೇ ಹಂತದಲ್ಲಿ ಅಭಿವೃದ್ಧಿ ಕುಂಠಿತವಾಗಿರುವ ಜಿಲ್ಲೆಗಳಲ್ಲಿ ಸಾರ್ವಜನಿಕ ವಿತರಣಾ ವ್ಯವಸ್ಥೆ ಮತ್ತು ಇತರೆ ಕಲ್ಯಾಣ ಯೋಜನೆಗಳ ಮೂಲಕ ಸಾರವರ್ಧಿತ ಅಕ್ಕಿ ವಿತರಿಸಲಾಗುವುದು. ಮೂರನೇ ಹಂತದಲ್ಲಿ 2024 ರೊಳಗೆ ಉಳಿದ ಜಿಲ್ಲೆಗಳಲ್ಲಿ ಅಕ್ಕಿ ವಿತರಿಸಲು ಚಾಲನೆ ನೀಡಲಾಗುತ್ತದೆ. ಈ ಯೋಜನೆಗೆ ವಾರ್ಷಿಕ 2700 ಕೋಟಿ ರೂಪಾಯಿ ವೆಚ್ಚವಾಗಲಿದ್ದು, ಕೇಂದ್ರ ಸರ್ಕಾರ ಸಂಪೂರ್ಣ ವೆಚ್ಚ ಭರಿಸಲಿದೆ ಎಂದು ಹೇಳಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada