ಬೆಂಗಳೂರು ಪೊಲೀಸರ ಜೊತೆ ಡಿಜಿ ಐಜಿಪಿ ಪ್ರವೀಣ್ ಸೂದ್ ಹೈವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ. ಸಂಜೆ 4 ಗಂಟೆಗೆ ಸಭೆ ಆರಂಭವಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಆಯುಕ್ತರು ಹಾಗೂ ಡಿಸಿಪಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ಹಲಾಲ್ ,ಅಜಾನ್ ಸೇರಿ ಕಾನೂನು ಸುವ್ಯವಸ್ಥೆಯ ಹಲವು ವಿಚಾರಗಳ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ, ಹಾಗೂ ಅಪರಾಧ ನಿಯಂತ್ರಣದ ಕುರಿತು ಸುದೀರ್ಘವಾದ ಚರ್ಚೆ ನಡೆಸಲಾಗಿದೆ. ಹಲವು ವಿಚಾರಗಳಲ್ಲಿ ತೆಗೆದುಕೊಂಡ ಕ್ರಮಗಳ ಬಗ್ಗೆ ಡಿಜಿಪಿಗೆ ವರದಿ ನೀಡಲು ಬೆಂಗಳೂರು ಪೊಲೀಸರು ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಅಲ್ಲದೆ ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಬಗ್ಗೆ ಪೊಲೀಸರಿಗೆ ಡಿಜಿ ಐಜಿಪಿ ಪ್ರವೀಣ್ ಸೂದ್ ಕಿವಿಮಾತು ಹೇಳಿದ್ದಾರೆ ಎನ್ನಲಾಗಿದೆ.
Next Post
ಹೆಲ್ಪ್".ಓಟಿಟಿ "ಹೆಲ್ಪ್".
Thu Apr 7 , 2022
ಹೆಲ್ಪ್”.ಓಟಿಟಿ “ಹೆಲ್ಪ್”. ಬಾಲ್ಯ ಸ್ನೇಹಿತನಿಗೆ ಸಿಂಪಲ್ ಸುನಿ ಹಾರೈಕೆ ಸಾಮಾನ್ಯನ ಜೀವನದಲ್ಲಾಗುವ ಏರಿಳಿತಗಳನ್ನಿಟ್ಟುಕೊಂಡು ‘ಹೆಲ್ಪ್’ ಎಂಬ ಕಿರುಚಿತ್ರ ನಿರ್ದೇಶನ ಮಾಡಿದ್ದಾರೆ ನಿರ್ದೇಶಕ ಜೆರಿನ್ ಚಂದನ್. ಏಪ್ರಿಲ್ 27ರಂದು ಈ ಕಿರುಚಿತ್ರ ಬಿಡುಗಡೆಗೆ ಸಿದ್ದವಾಗಿದೆ.ಇದೇ ಪ್ರಥಮ ಬಾರಿಗೆ ಕನ್ನಡ ಕಿರುಚಿತ್ರವೊಂದು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿರುವುದು ವಿಶೇಷ. ಕಿರುಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಖ್ಯಾತ ನಿರ್ದೇಶಕ ಸಿಂಪಲ್ ಸುನಿ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು. ಕ್ಲಾಸ್ ರೂಮ್ […]

You May Like
-
11 months ago
ಉತ್ತರಾಖಂಡ್ ಮುಖ್ಯಮಂತ್ರಿಯಾಗಿ ʼಪುಷ್ಕರ್ ಸಿಂಗ್ ಧಾಮಿ
-
10 months ago
ಸಿದ್ದಗಂಗಾ ಮಠಕ್ಕೆ ಭೇಟಿ ನೀಡಲಿರುವ ರಾಹುಲ್ ಆಗಮನ…