ಪೆಟ್ರೋಲ್ , ಡೀಸೆಲ್ ಬೆಲೆ ಏರಿಕೆಗೆ ಕಳೆದ 8 ದಿನಗಳಿಂದ ಬ್ರೇಕ್ ಬಿದ್ದಿದೆ. ಕಚ್ಚಾ ತೈಲ ಬೆಲೆ ಮತ್ತಷ್ಟು ಗಗನಮುಖಿಯಾಗುತ್ತಿದ್ದರೂ ರಾಷ್ಟ್ರ ರಾಜಧಾನಿ ದೆಹಲಿ, ವಾಣಿಜಯ ರಾಜಧಾನಿ ಮುಂಬೈ ಬೆಂಗಳೂರು ಸೇರಿ ದೇಶದ ಮಹಾನಗರಗಳಲ್ಲಿ ಹಾಗೂ ಹಲವೆಡೆ ಪೆಟ್ರೋಲ್, ಡೀಸೆಲ್ ದರದಲ್ಲಿ ಯಾವುದೇ ವ್ಯತ್ಯಾಸವಾಗಿಲ್ಲ. ಆದರೂ, ಹಲವು ನಗರಗಳಲ್ಲಿ ಬೆಲೆಯಲ್ಲಿ ಏರಿಕೆ, ಇಳಿಕೆ ಕಂಡುಬರುತ್ತಿದೆ. ಇನ್ನು, ಕಚ್ಚಾ ತೈಲ ದರ ಏರುತ್ತಿರುವುದನ್ನು ಗಮನಿಸಿದರೆ ಮತ್ತೆ ದೇಶದ ಎಲ್ಲ ಕಡೆ ಇಂಧನ ದರ ಮತ್ತಷ್ಟು ದುಬಾರಿಯಾಗುತ್ತದಾ ಎಂಬ ಆತಂಕವೂ ಮೂಡುತ್ತದೆ. ದೇಶದ ಬಹುತೇಕ ಕಡೆ ಇಂಧನ ದರ ಪ್ರತಿದಿನ ಬೆಳಗ್ಗೆ 6 ಗಂಟೆಗೆ ವ್ಯತ್ಯಾಸವಾಗುತ್ತಲೇ ಇರುತ್ತದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada