ಐಷಾರಾಮಿ ಹೊಟೇಲ್ ಮೇಲೆ ಸಿಸಿಬಿ ಪೊಲೀಸರು ದಾಳಿ…!
ಪಾರ್ಟಿ ಮಾಡುತ್ತಿದ್ದ ಯುವಕ-ಯುವತಿಯರ ಗುಂಪಿನ ಮೇಲೆ ಸಿಸಿಬಿ ದಾಳಿ..!
ಐಟಿ ಸಿಟಿ ಬೆಂಗಳೂರಿನಲ್ಲಿ ಅವಧಿಗೂ ಮೀರಿ ಪಾರ್ಟಿ ನಡೆಸುತ್ತಿದ್ದ ಯುವಕ-ಯುವತಿಯರ ಗುಂಪಿನ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದಾರೆ. ಮಾರತ್ತಹಳ್ಳಿಯ ಔಟರ್ ರಿಂಗ್ ರಸ್ತೆಯಲ್ಲಿರುವ ಐಷಾರಾಮಿ ಹೋಟೆಲ್ ನಲ್ಲಿ ಅವಧಿಗೂ ಮೀರಿ ನಸುಕಿನ ಜಾವ 3.30ರವರೆಗೂ ಪಾರ್ಟಿ ನಡೆಸುತ್ತಿರುವುದು ಕಂಡುಬಂದ ಹಿನ್ನಲೆ ಸಿಸಿಬಿ ಪೊಲೀಸರು ದಾಳಿ ಮಾಡಿ 64 ಯುವಕರು, 24 ಯುವತಿಯರನ್ನು ಬಂಧಿಸಿದ್ದಾರೆ. ದಕ್ಷಿಣ ಆಫ್ರಿಕಾ ಮೂಲದ ವ್ಯಕ್ತಿಯೊಬ್ಬ ಪಾರ್ಟಿ ಆಯೋಜಿಸಿರುವುದು ಬೆಳಕಿಗೆ ಬಂದಿದೆ. ಇನ್ನು ಪಾರ್ಟಿಯಲ್ಲಿ ಡ್ರಗ್ಸ್ ಸೇವನೆ ಮಾಡಿದ ಅನುಮಾನ ಬಂದಿದ್ದು, ಪಾರ್ಟಿಯಲ್ಲಿ ಭಾಗಿಯಾದವರಿಗೆ ಮೆಡಿಕಲ್ ಚೆಕಪ್ ಮಾಡಲಾಗಿದೆ. ಪಾರ್ಟಿಯಲ್ಲಿ ಉತ್ತರ ಭಾರತದ ಯುವತಿಯರೇ ಹೆಚ್ಚು ಭಾಗಿಯಾಗಿದ್ದಾರೆ. ಈ ಪ್ರಕರಣ ಸಂಬಂಧ ಹೆಚ್ ಎಎಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada