ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರು ಫಿಟ್ನೆಸ್ ಗೆ ಕಡೆಗೂ ಹೆಚ್ಚು ಗಮನ ಕೊಡುತ್ತಾರೆ. ತಾವು ಜಿಮ್ ನಲ್ಲಿ ಕಳೆದ ಕ್ಷಣಗಳ ವೀಡಿಯೋ, ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿಕೊಳ್ಳುವ ಮೂಲಕ ಅಭಿಮಾನಿಗಳಿಗೂ ಆರೋಗ್ಯದ ಬಗ್ಗೆ ಟಿಪ್ಸ್ ಕೊಟ್ಟಿದ್ದರೆ. ರಶ್ಮಿಕಾ ಹೊಸದೊಂದು ವೀಡಿಯೋ ಹಾಕಿದ್ದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ರಶ್ಮಿಕಾ ವರ್ಕೌಟ್ ಮಾಡುವುದನ್ನು ನೋಡಿ ಅಭಿಮಾನಿಗಳು ಸುಸ್ತಾಗಿದ್ದಾರೆ. ಇನ್ಸ್ಟಾಗ್ರಾಮ್ನಲ್ಲಿ ವೀಡಿಯೋ, ಫೋಟೋಗಳನ್ನು ಅಭಿಮಾನಿಗಳೊಂದಿಗೆ ಶೇರ್ ಮಾಡಿದ್ದಾರೆ. ವೀಡಿಯೋ ಶೇರ್ ಮಾಡಿದ ಕೆಲವೇ ಗಂಟೆಗಳಲ್ಲಿ ಅಭಿಮಾನಿಗಳು 6 ಸಾವಿರಕ್ಕೂ ಹೆಚ್ಚು ಕಾಮೆಂಟ್ ಮಾಡಿದ್ದಾರೆ. ಈ ವೀಡಿಯೋಗೆ ರಶ್ಮಿಕಾ, ನಿಮಗೆ ಈ ವೀಡಿಯೋ ಇಷ್ಟವಾಗಿದ್ರೆ ಬೈಸೆಪ್ಸ್ ಇಮೋಜಿ ಕಳುಹಿಸಿ ಎಂದು ಬರೆದುಕೊಂಡಿದ್ದಾರೆ. ಕಳೆದ ಬಾರಿಯೂ ಈ ನಟಿ ವರ್ಕೌಟ್ ವೀಡಿಯೋ ಶೇರ್ ಮಾಡಿದ್ದರು. ಪ್ರಸ್ತುತ ಬಾಲಿವುಡ್, ಟಾಲಿವುಡ್ ಎಂದು ಬ್ಯುಸಿಯಾಗಿರುವ ಈ ನಟಿ ಸಾಲು ಸಾಲು ಚಿತ್ರಗಳಲ್ಲಿ ನಟಿಸುತ್ತಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada