ಅನೇಕ ಗಣ್ಯರ ಉಪಸ್ಥಿತಿಯಲ್ಲಿ “ಹೋಮ್ ಮಿನಿಸ್ಟರ್” ಹಾಡುಗಳ ಬಿಡುಗಡೆ.

ರಿಯಲ್ ಸ್ಟಾರ್ ಉಪೇಂದ್ರ ನಾಯಕರಾಗಿ ನಟಿಸಿರುವ “ಹೋಮ್ ಮಿನಿಸ್ಟರ್” ಚಿತ್ರ ಇದೇ ಏಪ್ರಿಲ್ ಒಂದರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.ಅದಕ್ಕೂ ಮುನ್ನ ಜಿಬ್ರಾನ್ ಸಂಗೀತ ನೀಡಿರುವ ಈ ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಆನಂದ್ ಆಡಿಯೋ ಮೂಲಕ ಈ ಹಾಡುಗಳು ಬಿಡುಗಡೆಯಾಗಿದೆ.ಸಚಿವ ಮುನಿರತ್ನ, ಗೋಲ್ಡನ್‌ ಸ್ಟಾರ್ ಗಣೇಶ್, ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್, ನಿರಂಜನ್ ಸುಧೀಂದ್ರ, ಪ್ರಿಯಾಂಕ ಉಪೇಂದ್ರ ಹಾಗೂ ಸಾಯಿ ಗೋಲ್ಡ್ ‌ಪ್ಯಾಲೆಸ್ ನ ಶರವಣ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಆಗಮಿಸಿ ಶುಭ ಹಾರೈಸಿದರು.

ಕೊರೋನ ಪೂರ್ವದಲ್ಲಿ ನಮ್ಮ ಚಿತ್ರ ಆರಂಭವಾಯಿತು. ಚಿತ್ರದ ಕಥೆ ಕೇಳಿದಾಗ ನನಗೆ ಒಂದು ಕಡೆ ಇಷ್ಟವಾಗುತ್ತಿದೆ. ಮತ್ತೊಂದು ಕಡೆಯಿಂದ ಭಯ. ಜನ ಈ ಕಥೆಯನ್ನು ಯಾವರೀತಿ ತೆಗೆದುಕೊಳ್ಳುತ್ತಾರೋ? ಎಂದು.ಕೊನೆಗೆ ನಿರ್ಮಾಪಕ ಪೂರ್ಣಚಂದ್ರ ನಾಯ್ಡು ಅವರು, ಈ ಸಿನಿಮಾ ಮಾಡೋಣ ಸರ್. ಎಲ್ಲರಿಗೂ ಹಿಡಿಸುತ್ತದೆ ಎಂದು ಭರವಸೆ ನೀಡಿದರು. ಇದೇ ಏಪ್ರಿಲ್ ಒಂದರಂದು ಚಿತ್ರ ಬಿಡುಗಡೆಯಾಗುತ್ತಿದೆ. ಜನ ಮೆಚ್ಚಿಕೊಳ್ಳುತ್ತಾರೆಂಬ ನಿರೀಕ್ಷೆಯಿದೆ. ನನ್ನೊಂದಿಗೆ ನಟಿಸಿರುವ ವೇದಿಕ , ತಾನ್ಯ ಹೋಪ್ ಸೇರಿದಂತೆ ಎಲ್ಲಾ ಕಲಾವಿದರ ಅಭಿನಯ ಚೆನ್ನಾಗಿದೆ. ನಮ್ಮ ಕರೆಗೆ ಓಗೊಟ್ಟು ಬಂದಿರುವ ಎಲ್ಲಾ ಗಣ್ಯರಿಗೆ ಧನ್ಯವಾದ ಎಂದರು ಉಪೇಂದ್ರ.

ಚಿತ್ರದಲ್ಲಿ ನಟಿಸಿರುವ ವೇದಿಕ, ತಾನ್ಯ ಹೋಪ್, ಚಾಂದಿನಿ, ವಿನಯ್ ಚಂಡೂರ್, ಸಂಭಾಷಣೆ ಬರೆದಿರುವ ಧರ್ಮೇಂದ್ರ, ನಿರ್ಮಾಪಕರಾದ ಪೂರ್ಣಚಂದ್ರ ನಾಯ್ಡು , ಶ್ರೀಕಾಂತ್ ವೀರಮಾಚನೇನಿ ಹಾಗೂ ಚಿತ್ರವನ್ನು ಬಿಡುಗಡೆ ಮಾಡುತ್ತಿರುವ ಬೆಂಗಳೂರು ಕುಮಾರ್ ಫಿಲಂಸ್ ನ ಕುಮಾರ್ “ಹೋಮ್ ಮಿನಿಸ್ಟರ್” ಕುರಿತು ಮಾತನಾಡಿದರು.ಸುಜಯ್ ಕೆ ಶ್ರೀಹರಿ ನಿರ್ದೇಶಿಸಿರುವ ಈ ಚಿತ್ರದ ತಾರಾಬಳಗದಲ್ಲಿ ಉಪೇಂದ್ರ, ವೇದಿಕ, ತಾನ್ಯ ಹೋಪ್, ಚಾಂದಿನಿ, ಸುಮನ್ ರಂಗನಾಥ್, ಸಾಧುಕೋಕಿಲ, ಶ್ರೀನಿವಾಸ ಮೂರ್ತಿ, ಸುಧಾ ಬೆಳವಾಡಿ, ತಿಲಕ್, ಅವಿನಾಶ್, ಮಾಳವಿಕ ಅವಿನಾಶ್, ಲಾಸ್ಯ ಮುಂತಾದವರಿದ್ದಾರೆ.

.

Leave a Reply

Your email address will not be published. Required fields are marked *

Next Post

ಮಾರ್ಚ್ 25ರಿಂದ ಜೀ5ನಲ್ಲಿ ಅಜಿತ್ ವಲಿಮೈ ಧಮಾಕಾ!

Tue Mar 22 , 2022
ಥಲಾ ಅಜಿತ್ ನಟನೆಯ ಬ್ಲಾಕ್ ಬಸ್ಟರ್ ಆಕ್ಷನ್ ಥ್ರಿಲ್ಲರ್ ವಲಿಮೈ ಸಿನಿಮಾ ಜೀ5 ಒಟಿಟಿಗೆ ಗ್ರ್ಯಾಂಡ್ ಎಂಟ್ರಿ ಕೊಡ್ತಿದೆ. ಇದೇ ಶುಭ ಶುಕ್ರವಾರದಂದು ಪ್ರತಿಷ್ಠಿತ ಜೀ5 ಒಟಿಟಿಯಲ್ಲಿ ವಲಿಮೈ ರಿಲೀಸ್ ಆಗ್ತಿದೆ. ಕಳೆದ ಫೆಬ್ರವರಿ 25ರಂದು ಪಂಚ ಭಾಷೆಯಲ್ಲಿ ತೆರೆಗಪ್ಪಳಿಸಿದ್ದ ವಲಿಮೈ ಬಾಕ್ಸ್ ಆಫೀಸ್ ನಲ್ಲಿ ಕಮಾಲ್ ಮಾಡಿತ್ತು. ಕೋಟಿ ಕೋಟಿ ಹಣ ಬಾಚಿತ್ತು. ಅಜಿತ್ ಆಕ್ಷನ್ ಬೈಕ್ ಸ್ಟಂಟ್ ಕಂಡು ಫ್ಯಾನ್ಸ್ ಥ್ರಿಲ್ಲ್ ಆಗಿದ್ದರು. ಇದೀಗ ಜೀ 5 […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: