ಬಾಲಿವುಡ್ ಬಾದ್ ಶಾ ಎಂದೇ ಖ್ಯಾತಿಯಾಗಿರುವ ಶಾರುಖ್ ಖಾನ್ ಯಾರಿಗೆ ತಾನೇ ಗೊತ್ತಿಲ್ಲ ಹೇಳಿ..? ಅವರ ನಟನೆಗೆ ಮತ್ತು ಚಿತ್ರಗಳಿಗೆ ಬರೀ ನಮ್ಮ ದೇಶದಲ್ಲಿ ಮಾತ್ರ ಅಭಿಮಾನಿಗಳಿಲ್ಲ, ವಿದೇಶದಲ್ಲಿಯೂ ದೊಡ್ಡ ಅಭಿಮಾನಿಗಳ ಬಳಗವೇ ಇದೆ. ಸದ್ಯ ಶಾರುಖ್ ಅವರು ‘ಪಠಾಣ್’ ಸಿನಿಮಾದ ಮೇಲೆ ಹೆಚ್ಚು ಗಮನ ಹರಿಸಿದ್ದಾರೆ. ದೀಪಿಕಾ ಪಡುಕೋಣೆ ಮತ್ತು ಜಾನ್ ಅಬ್ರಾಹಂ ಕೂಡ ‘ಪಠಾಣ್’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಅವರಿಬ್ಬರ ಲುಕ್ ಈಗಾಗಲೇ ಬಹಿರಂಗ ಆಗಿದೆ. ಈಗ ಅಧಿಕೃತವಾಗಿ ಶಾರುಖ್ ಖಾನ್ ಅವರೇ ತಮ್ಮ ಹೊಸ ಫೋಟೋವನ್ನು ಹಂಚಿಕೊಂಡಿದ್ದಾರೆ. ಈ ಫೋಟೋದಲ್ಲಿ ಅವರ 8 ಪ್ಯಾಕ್ಸ್ ಗಮನ ಸೆಳೆಯುತ್ತಿದೆ. ಶಾರುಖ್ ಅಭಿಮಾನಿಗಳು ಫಿದಾ ಆಗಿದ್ದಾರೆ. ಅನೇಕ ಸೆಲೆಬ್ರಿಟಿಗಳು ಕೂಡ ಬಗೆ ಬಗೆಯಲ್ಲಿ ಕಮೆಂಟ್ ಮಾಡುವ ಮೂಲಕ ಮೆಚ್ಚುಗೆ ಸೂಚಿಸುತ್ತಿದ್ದಾರೆ. ಬಾಲಿವುಡ್ ನಲ್ಲಿ ‘ಪಠಾಣ್’ ಸಿನಿಮಾ ಭಾರಿ ನಿರೀಕ್ಷೆ ಮೂಡಿಸಿದೆ. ಈ ಚಿತ್ರಕ್ಕೆ ಸಿದ್ದಾರ್ಥ್ ಆನಂದ್ ನಿರ್ದೇಶನ ಮಾಡುತ್ತಿದ್ದು, ಯಶ್ ರಾಜ್ ಫಿಲ್ಮ್ಸ್ ಸಂಸ್ಥೆ ಬಂಡವಾಳ ಹೂಡುತ್ತಿದೆ. ಈ ಸಿನಿಮಾದಲ್ಲಿ ಶಾರುಖ್ ಖಾನ್ ಬೇರೆಯದ್ದೇ ರೀತಿಯಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದಕ್ಕಾಗಿ ಸಿಕ್ಕಾಪಟ್ಟೆ ಶ್ರಮ ಪಟ್ಟು ಜಿಮ್ ನಲ್ಲಿ ವರ್ಕೌಟ್ ಮಾಡಿ ಬಾಡಿ ಟ್ರಾನ್ಸ್ ಫಾರ್ಮೇಷನ್ ಮಾಡಿಕೊಂಡಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada