“ಗಿರ್ಕಿ” ಮೋಷನ್ ಪೋಸ್ಟರ್ ಬಿಡುಗಡೆ ಮಾಡಿದರ ಸೆಂಚುರಿ ಸ್ಟಾರ್..

 

ಎದಿತ್ ಫಿಲಂ ಫ್ಯಾಕ್ಟರಿ ಮತ್ತು ವಾಸುಕಿ ಮೂವೀಸ್ ಸಹಯೋಗದೊಂದಿಗೆ ತರಂಗ ವಿಶ್ವ ನಿರ್ಮಿಸಿರುವ “ಗಿರ್ಕಿ” ಚಿತ್ರದ ಮೋಷನ್ ಪೋಸ್ಟರನ್ನು ಸೆಂಚುರಿ ಸ್ಟಾರ್ ಶಿವರಾಜ್ ಕುಮಾರ್ ಇತ್ತೀಚೆಗೆ ಬಿಡುಗಡೆ ಮಾಡಿ, ಶುಭ ಕೋರಿದ್ದಾರೆ. A2 music ಮೂಲಕ ಬಿಡುಗಡೆಯಾಗಿರುವ ಈ ಮೋಷನ್ ಪೋಸ್ಟರ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ.

ಸದ್ಯದಲ್ಲೇ ಟೀಸರ್ ಬಿಡುಗಡೆಯಾಗಲಿದ್ದು, ಮೇ ನಲ್ಲಿ ಚಿತ್ರ ತೆರೆಗೆ ಬರಲಿದೆ.

ಲವ್, ಥ್ರಿಲ್ಲರ್  ಹಾಗೂ ಕಾಮಿಡಿ ಕಥಾಹಂದರ ಹೊಂದಿರುವ ಈ ಚಿತ್ರವನ್ನು ವೀರೇಶ್ ಪಿ.ಎಂ.ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಸಹ ಇವರೇ ಬರೆದಿದ್ದಾರೆ. ಈ ಹಿಂದೆ ಯೋಗರಾಜ್ ಭಟ್ ಅವರೊಂದಿಗೆ ಕೆಲಸ ಮಾಡಿದ ಅನುಭವ ವೀರೇಶ್ ಪಿ.ಎಂ ಅವರಿಗಿದೆ.

ವಾಸುಕಿ ಭುವನ್ ಅವರ ಸಹ ನಿರ್ಮಾಣವಿರುವ ಈ ಚಿತ್ರಕ್ಕೆ ವೀರ್ ಸಮರ್ಥ್ ಸಂಗೀತ ನೀಡಿದ್ದಾರೆ‌. ಯೋಗರಾಜ್ ಭಟ್, ಜಯಂತ ಕಾಯ್ಕಿಣಿ, ವೀರೇಶ್.ಪಿ.ಎಂ ಹಾಡುಗಳನ್ನು ಬರೆದಿದ್ದಾರೆ. ನವೀನ್ ಕುಮಾರ್ ಛಲ್ಲ ಛಾಯಾಗ್ರಹಣ, ಮಧು ತುಂಬಕೆರೆ ಅವರ ಸಂಕಲನವಿರುವ ಈ ಚಿತ್ರಕ್ಕೆ,ವಿನೋದ್ ಮಾಸ್ಟರ್ ಸಾಹಸ ನಿರ್ದೇಶನ ಹಾಗೂ ರಾಮು, ಮೋಹನ್ ಅವರ ನೃತ್ಯ ನಿರ್ದೇಶನವಿದೆ.

ತಮ್ಮ ಕಾಮಿಡಿ ಮೂಲಕ ಮನೆಮಾತಾಗಿರುವ ತರಂಗ ವಿಶ್ವ ಹಾಗೂ ವಿಲೋಕ್ ರಾಜ್ ನಾಯಕರಾಗಿ ನಟಿಸಿದ್ದು, “ಬಿಗ್ ಬಾಸ್” ಖ್ಯಾತಿಯ ದಿವ್ಯ ಉರುಡುಗ ಹಾಗೂ ರಾಶಿ ಮಹದೇವ್ ನಾಯಕಿಯಾಗಿ ನಟಿಸಿದ್ದಾರೆ

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಡ್ರಗ್ಸ್ ಇನ್ ಬಿಗ್ ಬಾಸ್..

Mon Apr 4 , 2022
ಮೊನ್ನೆತಡರಾತ್ರಿ ಡ್ರಗ್ಸ್ ಪಾರ್ಟಿ ಮೇಲೆ ಪೊಲೀಸರು ರೇಡ್ ಮಾಡಿದ್ದಾರೆ. ಇದರಲ್ಲಿ ಖ್ಯಾತ ಗಾಯಕ ಹಾಗೂ ಬಿಗ್ ಬಾಸ್ ವಿನ್ನರ್ ಒಬ್ಬರು ಸಿಕ್ಕಿ ಹಾಕಿಕೊಂಡಿದ್ದಾರೆ ಎನ್ನಲಾಗಿದೆ.   ಸಿನಿಮಾ ರಂಗಕ್ಕೂ ಡ್ರಗ್ಸ್‌ಗೂ ಅವಿನಾಭಾವ ಸಂಬಂಧ. ಹಿಂದಿ, ತೆಲುಗು, ತನ್ನಡ, ತಮಿಳು, ಮಲಯಾಳಂ ಸೇರಿದಂತೆ ಭಾರತದ ವಿವಿಧ ಚಿತ್ರರಂಗದಲ್ಲಿ ಡ್ರಗ್ಸ್ ಪಾರ್ಟಿ ಡ್ರಗ್ಸ್ ಕೇಸ್‌ಗಳು) ಆಗಾಗ ಸುದ್ದಿ ಮಾಡುತ್ತವೇ ಇರುತ್ತವೆ. ಇದೀಗ ಹೈದರಾಬಾದ್‌ನಲ್ಲಿ ಸೆಲಿಬ್ರಿಟಿಗಳ ಡ್ರಗ್ಸ್ ಪಾರ್ಟಿಯೊಂದು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡಿದೆ. […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: