ಶೋಕಿವಾಲನಿಗೆ ಸಾಥ್ ನೀಡಲು ಬಂದ ಸ್ಯಾಂಡಲ್ ವುಡ್ ಸ್ಟಾರ್ ನಿರ್ದೇಶಕರು

 

ಅಜಯ್ ರಾವ್ ನಾಯಕರಾಗಿ ನಟಿಸಿರುವ “ಶೋಕಿವಾಲ” ಚಿತ್ರದ ಹಾಡೊಂದರ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಈ ಹಾಡಿನ ವಿಶೇಷತೆ ಏನೆಂದರೆ ನಾಯಕ ಅಜಯ್ ರಾವ್ ಅವರೊಂದಿಗೆ  ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕರಾದ ರವಿ ಬಸ್ರೂರ್, ನಂದಕಿಶೋರ್, ಹರಿ ಸಂತೋಷ್, ಶಶಾಂಕ್, ವಿ.ನಾಗೇಂದ್ರ ಪ್ರಸಾದ್ ಹೆಜ್ಜೆ ಹಾಕಿದ್ದಾರೆ.  ಎಲ್ಲಾ ದಿಗ್ಗಜರ ಸಮಾಗಮದಲ್ಲಿ ಮೂಡಿಬಂದಿರುವ ಈ ಹಾಡು ಜನಮನಸೂರೆಗೊಂಡು, ಸಾಮಾಜಿಕ ಜಾಲ ತಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.

ಈ ಹಾಡನ್ನು ಚೇತನ್ ಕುಮಾರ್ ಬರೆದಿದ್ದು, ಶಶಾಂಕ್ ಶೇಷಗಿರಿ ಹಾಡಿದ್ದಾರೆ.  ಶ್ರೀಧರ್.ವಿ.ಸಂಭ್ರಮ್ ಸಂಗೀತ ಸಂಯೋಜಿಸಿದ್ದಾರೆ. ಚಾಮರಾಜಪೇಟೆಯ ಕಲಾವಿದರ ಸಂಘದಲ್ಲಿ ಹಾಡು ಬಿಡುಗಡೆ ಸಮಾರಂಭ ನಡೆಯಿತು. ಹಾಡಿನಲ್ಲಿ ನಟಿಸಿರುವ ನಿರ್ದೇಶಕರುಗಳೇ ಈ ಹಾಡನ್ನು ರೀಲಿಸ್ ಮಾಡಿದ್ದು ವಿಶೇಷ,ವಿ.ನಾಗೇಂದ್ರಪ್ರಸಾದ್, ನಂದಕಿಶೋರ್, ಹರಿ ಸಂತೋಷ್, ಚೇತನ್ ಕುಮಾರ್, ಮಹೇಶ್ ಕುಮಾರ್ ರವರು ಹಾಡನ್ನು ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭಕೋರಿದರು. 5 ಜನ ನಿರ್ದೇಶಕರನ್ನು ಚಿತ್ರ ತಂಡದಿಂದ ಆತ್ಮೀಯವಾಗಿ ಸನ್ಮಾನಿಸಲಾಯಿತು.

ಇದೆ ತಿಂಗಳ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಕುಟುಂಬ ಸಮೇತ ಕುಳಿತು ನೋಡುವ ಸಿನಿಮಾವಾಗಿದೆ. ಎಲ್ಲರು ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದರು ನಿರ್ಮಾಪಕ T.R.ಚಂದ್ರಶೇಖರ್.”ಜಾಕಿ” ನಿರ್ದೇಶನದ ಈ ಚಿತ್ರಕ್ಕೆ ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ನವೀನ್ ಕುಮಾರ್ ಈ ಚಿತ್ರದ ಛಾಯಾಗ್ರಹಕರು.

ಅಜಯ್ ರಾವ್ ಅವರಿಗೆ ನಾಯಕಿಯಾಗಿ ಸಂಜನಾ ಆನಂದ್ ನಟಿಸಿದ್ದಾರೆ. ಶರತ್ ಲೋಹಿತಾಶ್ವ, ಅರುಣ ಬಾಲರಾಜ್, ತಬಲಾ ನಾಣಿ, ಪ್ರಮೋದ್ ಶೆಟ್ಟಿ, ಗಿರಿ, ನಾಗರಾಜ ಮೂರ್ತಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಕಿಶೋರ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.

 

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಕಿರಣ್ ರಾಜ್ ಅಭಿನಯದ "ಕನ್ನಡತಿ" ಧಾರಾವಾಹಿ ಸದ್ಯದಲ್ಲೇ ಹಿಂದಿಯಲ್ಲಿ ಆರಂಭ.

Wed Apr 20 , 2022
    ಕರುನಾಡ ಆಚೆಗೂ ಹಬ್ಬಿದೆ  ಕನ್ನಡದ ಹುಡುಗ ಕಿರಣ್ ರಾಜ್ ಜನಪ್ರಿಯತೆ. ಒಂದು ಕಾಲದಲ್ಲಿ ಹಿರಿತೆರೆ ಹಾಗೂ ಕಿರುತೆರೆಗೆ ಸಾಕಷ್ಟು ವ್ಯತ್ಯಾಸವಿತ್ತು. ಈಗ ಹಾಗಲ್ಲ. ಕಿರುತೆರೆಯಲ್ಲಿ ಸಾಕಷ್ಟು ಅದ್ದೂರಿ ಹಾಗೂ ಅಪಾರವೆಚ್ಚದಲ್ಲಿ ನಿರ್ಮಾಣವಾಗುತ್ತಿದೆ. ಅಷ್ಟೇ ಜಮಪ್ರಿಯವೂ ಆಗುತ್ತಿದೆ. ಜನಮನ್ನಣೆ ಪಡೆದ ಧಾರಾವಾಹಿಗಳಲ್ಲಿ ಕಿರಣ್ ರಾಜ್ ಅಭಿನಯದ ” ಕನ್ನಡತಿ” ಕೂಡ ಒಂದು. ಇಲ್ಲಿ ಅಪಾರ ಮೆಚ್ಚುಗೆ ಪಡೆದಿರುವ ಈ ಧಾರಾವಾಹಿ ಈಗ ಹಿಂದಿಗೆ ಡಬ್ ಆಗಲಿದೆ. “ಅಜ್ನಾಬಿ ಬನೇ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: