ಹೊಸ ಹೆಜ್ಜೆ ಇಟ್ಟ ವಸಿಷ್ಠ ಸಿಂಹ

ಹೊಸ ಹೆಜ್ಜೆ ಇಟ್ಟ ವಸಿಷ್ಠ ಸಿಂಹ

ಸಿಂಹಾ ಹೆಸರಿನಲ್ಲಿ ಆಡಿಯೋ ಕಂಪನಿ ಅನಾವರಣ

ವಿಲನ್ ಹೀರೋನೂ ಆಗಬಹುದು.. ಹೀರೋ ಸಿಂಗರ್ ಆಗಬಹುದು ಅನ್ನೋದು ಸಾಬೀತು ಮಾಡಿದವರು ಕಂಚಿನ ಕಂಠದ ಗಾಯಕ, ಖಡಕ್ ಖಳನಟ, ಹ್ಯಾಂಡ್ಸಮ್ ಹೀರೋ ವಸಿಷ್ಠ ಸಿಂಹ. ಇವತ್ತು ವಸಿಷ್ಠ ಸಿಂಹ ಕನ್ನಡ ಚಿತ್ರರಂಗದ ಬಹುಬೇಡಿಕೆ ನಟ, ಗಾಯಕ..ಪಕ್ಕದ ಟಾಲಿವುಡ್ ನಲ್ಲಿಯೂ ಮಿಂಚುತ್ತಿರುವ ಪ್ರತಿಭಾನ್ವಿತ ನಾಯಕ ನಟ. ಗಾಯಕನಾಗಿ ಸಾಧನೆ ಮಾಡಬೇಕೆಂಬ ಕನಸು ಹೊತ್ತು ಬಂದ ವಸಿಷ್ಠ ಅವರಿಗೆ ನಾಯಕನಟ, ಖಳ‌ನಟನಾಗಿಯೂ ಕಮಾಲ್ ಮಾಡುವ ಅವಕಾಶ ಸಿಕ್ತು. ಈ ಅವಕಾಶ ಸದುಪಯೋಗಪಡಸಿಕೊಂಡು ಇವತ್ತು ಹೊಸ ಹೆಜ್ಜೆ ಇಟ್ಟಿದ್ದಾರೆ. ಹೊಸ ಹೊಸ ಪ್ರತಿಭೆಗಳಿಗೆ ಅವಕಾಶ ನೀಡುವ ನಿಟ್ಟಿನಲ್ಲಿ ತಮ್ಮದೇ ಆಡಿಯೋ ಸಂಸ್ಥೆಯನ್ನು ಅನಾವರಣ ಮಾಡಿದ್ದಾರೆ.

ಸಿಂಹಾ ಆಡಿಯೋ ಲೋಗೋ‌ ಲಾಂಚ್

ಅಪ್ಪನ ಮುದ್ದಿನ ಮಗನಾಗಿರುವ ವಸಿಷ್ಠ ತಂದೆಯ ಹೆಸರಿನಡಿ, ತನ್ನ ನೆಚ್ಚಿನ ಆರಾಧ್ಯ ತಾಯಿ ಚಾಮುಂಡೇಶ್ವರಿ ನೆನೆಪಿನಾರ್ಥವಾಗಿ ಸಿಂಹಾ ಎಂಬ ಹೆಸರಿನಡಿ ಆಡಿಯೋ ಕಂಪನಿ ಶುರು ಮಾಡಿದ್ದಾರೆ.ನೆಚ್ಚಿನ ಗೆಳೆಯನ ಹಾಗೂ ಅಚ್ಚುಮೆಚ್ಚಿನ ಗುರು ಸ್ವರಬ್ರಹ್ಮ ಹಂಸಲೇಖ ಸಾಥ್ ನಲ್ಲಿ ಆಡಿಯೋ‌ ಲೋಗೋ ಅನಾವರಣಗೊಂಡಿದೆ.ಕಾಲಚಕ್ರ ಹಾಡು ಬಿಡುಗಡೆ

ಸುಮನ್ ಕ್ರಾಂತಿ ನಿರ್ದೇಶನ ಹಾಗೂ ನಿರ್ಮಾಣದಲ್ಲಿ ಮೂಡಿಬಂದಿರುವ, ವಿಭಿನ್ನ ಗೆಟಪ್ ನಲ್ಲಿ ವಸಿಷ್ಠ ಬಣ್ಣ ಹಚ್ಚಿರುವ ಕಾಲಚಕ್ರ ಸಿನಿಮಾದ ನೀನೇ ಬೇಕು ಎಂಬ ಹಾಡು ವಸಿಷ್ಠ ಸಿಂಹ ಸಾರಥ್ಯದ ಸಿಂಹಾ ಆಡಿಯೋ ಕಂಪನಿಯಲ್ಲಿ ಬಿಡುಗಡೆಯಾಗಿದೆ. ತಮ್ಮದೆ ಸಿನಿಮಾದ ಮೊದಲ ಹಾಡು ತಮ್ಮದೇ ಆಡಿಯೋ ಕಂಪನಿ ಪಾಲಾಗಿರೋದು ವಸಿಷ್ಠಗೆ ಡಬ್ಬಲ್ ಖುಷಿಕೊಟ್ಟಿದೆ

ಅಂದಹಾಗೇ ವಸಿಷ್ಠ ಸಿಂಹ ಕಿರಿಕ್ ಪಾರ್ಟಿ’ ಸಿನಿಮಾದ ‘ನೀಚ ಸುಳ್ಳು ಸುತ್ತೋ ನಾಲಿಗೆ..’, ‘ದಯವಿಟ್ಟು ಗಮನಿಸಿ..’ ಸಿನಿಮಾದ ‘ಮರೆತೇ ಹೋದೆನು..’ ಸೇರಿ ಹಲವು ಹಾಡುಗಳನ್ನು ಅವರು ಹಾಡಿದ್ದಾರೆ. ಅವರಿಗೆ ಸಂಗೀತದ ಮೇಲೂ ಆಸಕ್ತಿ ಹಾಗೂ ಹೊಸಪ್ರತಿಭೆಗಳನ್ನು ಬೆಳೆಸುವ ನಿಟ್ಟಿನಲ್ಲಿ ಸಿಂಹಾ ಆಡಿಯೋ ಸಂಸ್ಥೆ ಕಣ್ತೆರೆದಿದ್ದು, ದೊಡ್ಡ ಎತ್ತರಕ್ಕೆ ಬೆಳೆಯಲಿ ಅನ್ನೋದು ಅಭಿಮಾನಿಗಳ ಹಾರೈಕೆ.

ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ:
https://play.google.com/store/apps/details?id=com.nationaltv.kannada

Leave a Reply

Your email address will not be published. Required fields are marked *

Next Post

ಪೊಲೀಸರ ಜೊತೆ ಡಿಜಿ ಐಜಿಪಿ ಪ್ರವೀಣ್ ಸೂದ್ ಹೈವೋಲ್ಟೇಜ್ ಮೀಟಿಂಗ್

Thu Apr 7 , 2022
ಬೆಂಗಳೂರು ಪೊಲೀಸರ ಜೊತೆ ಡಿಜಿ ಐಜಿಪಿ ಪ್ರವೀಣ್ ಸೂದ್ ಹೈವೋಲ್ಟೇಜ್ ಮೀಟಿಂಗ್ ನಡೆಸಿದ್ದಾರೆ. ಸಂಜೆ‌ 4 ಗಂಟೆಗೆ ಸಭೆ ಆರಂಭವಾಗಿದೆ. ಪೊಲೀಸ್ ಆಯುಕ್ತ ಕಮಲ್ ಪಂತ್, ಹೆಚ್ಚುವರಿ ಆಯುಕ್ತರು ಹಾಗೂ ಡಿಸಿಪಿಗಳು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ಹಲಾಲ್ ,ಅಜಾನ್ ಸೇರಿ ಕಾನೂನು ಸುವ್ಯವಸ್ಥೆಯ ಹಲವು ವಿಚಾರಗಳ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ. ಬೆಂಗಳೂರು ನಗರದಲ್ಲಿ ಕಾನೂನು ಸುವ್ಯವಸ್ಥೆ, ಹಾಗೂ ಅಪರಾಧ ನಿಯಂತ್ರಣದ ಕುರಿತು ಸುದೀರ್ಘವಾದ ಚರ್ಚೆ ನಡೆಸಲಾಗಿದೆ. ಹಲವು ವಿಚಾರಗಳಲ್ಲಿ ತೆಗೆದುಕೊಂಡ […]

ffff

February 2023
M T W T F S S
 12345
6789101112
13141516171819
20212223242526
2728  
%d bloggers like this: