ಆಕ್ಲೆಂಡ್: ಭಾರತ ಎದುರು ಬೌಲಿಂಗ್ ಹಾಗೂ ಬ್ಯಾಟಿಂಗ್ನಲ್ಲಿ ಆಲ್ರೌಂಡ್ ಪ್ರದರ್ಶನ ತೋರಿದ ಮೆಗ್ ಲ್ಯಾನಿಂಗ್ ನೇತೃತ್ವದ ಆಸ್ಟ್ರೇ ಲಿಯಾ ತಂಡವು ಐಸಿಸಿ ಮಹಿಳಾ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಸೆಮಿಫೈನಲ್ಗೆ ಲಗ್ಗೆಯಿಟ್ಟಿದೆ. ಭಾರತ ನೀಡಿದ್ದ 278 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು 6 ವಿಕೆಟ್ಗಳ ಅಂತರದ ರೋಚಕ ಜಯ ಸಾಧಿಸಿದೆ. ಇದರ ಜತೆಯೇ ಟೂರ್ನಿಯಲ್ಲಿ ಸತತ 5ನೇ ಗೆಲುವು ದಾಖಲಿಸಿದೆ.ಇಲ್ಲಿನ ಈಡನ್ ಪಾರ್ಕ್ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ಭಾರತ ನೀಡಿದ್ದ 278 ರನ್ಗಳ ಸವಾಲಿನ ಗುರಿ ಬೆನ್ನತ್ತಿದ ಆಸ್ಟ್ರೇಲಿಯಾ ತಂಡವು ಭರ್ಜರಿ ಆರಂಭವನ್ನೇ ಪಡೆಯಿತು.
ಮೊದಲ ವಿಕೆಟ್ಗೆ ರಚೆಲ್ ಹೇನ್ಸ್ ಹಾಗೂ ಅಲಿಸಾ ಹೀಲಿ ಜೋಡಿ 121 ರನ್ಗಳ ಜತೆಯಾಟವಾಡುವ ಮೂಲಕ ಭದ್ರ ಬುನಾದಿ ಹಾಕಿ ಕೊಟ್ಟಿತು. ಭಾರತೀಯ ಬೌಲರ್ಗಳನ್ನು ಮನಬಂದಂತೆ ದಂಡಿಸಿದ ಅಲಿಸಾ ಹೀಲಿ 65 ಎಸೆತಗಳನ್ನು ಎದುರಿಸಿ 9 ಬೌಂಡರಿ ಸಹಿತ ಆಕರ್ಷಕ 72 ರನ್ ಚಚ್ಚಿದರು. ಇನಿಂಗ್ಸ್ನ 20ನೇ ಓವರ್ನಲ್ಲಿ ಸ್ಪಿನ್ನರ್ ಸ್ನೆಹ್ ರಾಣಾ, ಆಸೀಸ್ ವಿಕೆಟ್ ಕೀಪರ್ ಬ್ಯಾಟರ್ ಅಲಿಸಾ ಹೀಲಿಯನ್ನು ಬಲಿ ಪಡೆಯುವ ಮೂಲಕ ಭಾರತಕ್ಕೆ ಮೊದಲ ಯಶಸ್ಸು ದಕ್ಕಿಸಿಕೊಟ್ಟರು. ಇದರ ಬೆನ್ನಲ್ಲೇ ಮರು ಓವರ್ನಲ್ಲಿ ಮತ್ತೋರ್ವ ಆರಂಭಿಕ ಬ್ಯಾಟರ್ ರಚೆಲ್ ಹೇನ್ಸ್ ಅವರನ್ನು ಪೂಜಾ ವಸ್ತ್ರಾಕರ್ ಪೆವಿಲಿಯನ್ನಿಗಟ್ಟುವ ಮೂಲಕ ಭಾರತೀಯರ ಪಾಳಯದಲ್ಲಿ ಸಂಭ್ರಮದ ಅಲೆ ಉಕ್ಕುವಂತೆ ಮಾಡಿದರು.