ವಿದ್ಯಾರ್ಥಿಗಳ ಭವಿಷ್ಯದ ಪ್ರಮುಖವಾದ ಘಟ್ಟ ಎಂದೇ ಹೇಳಲಾಗುವ ಎಸ್ಎಸ್ಎಲ್ ಸಿ ಪರೀಕ್ಷೆ ಇಂದಿನಿಂದ ಆರಂಭವಾಗಿದೆ. ಹಿಜಾಬ್ ಧರಿಸಿ ಬಂದರೆ ಪರೀಕ್ಷಾ ಕೊಠಡಿಗೆ ಅವಕಾಶ ನೀಡುವುದಿಲ್ಲ. ಕಡ್ಡಾಯವಾಗಿ ಸಮವಸ್ತ್ರ ಧರಿಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬೇಕು.ಈ ಬಾರಿ 8,73,846 ಮಂದಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. 3444 ಕೇಂದ್ರಗಳನ್ನು ತೆರೆಯಲಾಗಿದೆ. ಪರೀಕ್ಷಾ ಕೇಂದ್ರಗಳ 200 ಮೀಟರ್ ಸುತ್ತ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10.30 ರಿಂದ ಮಧ್ಯಾಹ್ನ 1.45 ರ ವರೆಗೆ, ಕೋರ್ ವಿಷಯಗಳ ಪರೀಕ್ಷೆಗಳು ಮಧ್ಯಾಹ್ನ 2 ಗಂಟೆಯಿಂದ ಸಂಜೆ 5.15 ರವರೆಗೆ ನಡೆಯಲಿದೆ. ಪರೀಕ್ಷಾ ಕೇಂದ್ರಗಳಿಗೆ ತೆರಳಲು ವಿದ್ಯಾರ್ಥಿಗಳಿಗೆ ಕೆ.ಎಸ್.ಆರ್.ಟಿ.ಸಿ, ಬಿಎಂಟಿಸಿ ಬಸ್ಸ್ ನಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ.ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೂ ಶುಭವಾಗಲಿ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada