ಎಸ್ಎಸ್ಎಲ್ ಸಿ ಪರೀಕ್ಷೆಗೆ ಕೌಂಟ್ ಡೌನ್ ಪ್ರಾರಂಭವಾಗಿದ್ದು, ಮಾರ್ಚ್ 28ರ ಸೋಮವಾರದಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಲಿದೆ. ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಕೌಂಟ್ ಡೌನ್ ಪ್ರಾರಂಭವಾಗಿದ್ದು, ಮಾರ್ಚ್ 28ರ ಸೋಮವಾರದಿಂದ ರಾಜ್ಯಾದ್ಯಂತ ಪರೀಕ್ಷೆ ಆರಂಭವಾಗಲಿದೆ.ಈ ಬಾರಿ 8,73,846 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ರಾಜ್ಯದ 15,387 ಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದು, ಪರೀಕ್ಷೆ ಬರೆಯಲು 45,289 ಪರೀಕ್ಷಾ ಕೊಠಡಿಗಳ ಸಿದ್ಧತೆ ಮಾಡಲಾಗಿದೆ. 3,444 ಮುಖ್ಯ ಅಧೀಕ್ಷಕರ ನೇತೃತ್ವದಲ್ಲಿ SSLC ಪರೀಕ್ಷೆ ನಡೆಯಲಿದ್ದು, 49,817 ಕೊಠಡಿ ಮೇಲ್ವಿಚಾರಕರು ಭಾಗಿಯಾಗಲಿದ್ದಾರೆ. ಮಾರ್ಚ್ 28 ರಿಂದ ಎಪ್ರಿಲ್ 11ರವರೆಗೆ ಪರೀಕ್ಷೆ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 8,73,846 ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳು ಈ ವರ್ಷ ಎಕ್ಸಾಂ ಬರೆಯುತ್ತಿದ್ದಾರೆ. ಅದರಲ್ಲಿ 4,52,732 ಗಂಡು ಮಕ್ಕಳು ಹಾಗೂ 4,21,110 ಹೆಣ್ಣು ಮಕ್ಕಳಿದ್ದಾರೆ. 04 ಜನ ತೃತಿಯ ಲಿಂಗಿಗಳು ಈ ಬಾರಿ ಪರೀಕ್ಷೆ ಎದುರಿಸುತ್ತಿದ್ದಾರೆ.ವಿಭಿನ್ನ ಸಾಮರ್ಥ್ಯವುಳ್ಳ 5,307 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.
ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ:
https://play.google.com/store/apps/details?id=com.nationaltv.kannada